ಶಿವಮೊಗ್ಗ : ಕಾರ್ಖಾನೆಯಲ್ಲಿರುವ ಸಾಮಾಗ್ರಿಗಳನ್ನು ಕಡಿಮೆ ದರಕ್ಕೆ ಗುಜರಿಗೆ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ ವಿಐಎಸ್ಎಲ್ ಕಾರ್ಖಾನೆ ಮುಂದೆ ಕಾರ್ಮಿಕರು ಪ್ರತಿಭಟನೆ ನಡೆಸಿದರು.
ಶಿವಮೊಗ್ಗದ ಭದ್ರಾವತಿಯಲ್ಲಿರುವ ವಿಐಎಸ್ಎಲ್ ಕಾರ್ಖಾನೆ ಗೇಟ್ ಮುಚ್ಚಿ ಧರಣಿ ನಡೆಸಿದರು. ಆ ಮೂಲಕ ವಿಐಎಸ್ಎಲ್ ಅಧಿಕಾರಿಗಳ ವಿರುದ್ಧ ಕಾರ್ಮಿಕರು ಆಕ್ರೋಶ ಹೊರಹಾಕಿದರು.
50 ಸಾವಿರ, 1 ಲಕ್ಷ ರೂಪಾಯಿ ಬೆಲೆ ಬಾಳುವ ಕಬ್ಬಿಣದ ಸಾಮಾಗ್ರಿಗಳನ್ನು ಕಡಿಮೆ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಅಲ್ಲದೆ, ಗುಜರಿಗೆ ಹೊರಟಿದ್ದ ಲಾರಿ ತಡೆದು ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ : ಮೂರು ಹೆಲ್ಮೆಟ್ ಧರಿಸಿ ವಿಭಿನ್ನವಾಗಿ ಪ್ರತಿಭಟನೆ
ಮಳೆ ನಡುವೆ ಕಾರ್ಮಿಕರ ಪ್ರತಿಭಟನೆ
ಜಿಟಿಜಿಟಿ ಮಳೆ ನಡುವೆ ಗುತ್ತಿಗೆ ಕಾರ್ಮಿಕರ ಆಕ್ರೋಶ ಹೊರಹಾಕಿದ್ದು, ಹೆಚ್ಚು ದರಕ್ಕೆ ಕಬ್ಬಿಣದ ಸಾಮಾಗ್ರಿಗಳನ್ನು ಮಾರಾಟ ಮಾಡಲು ಒತ್ತಾಯಿಸಿದರು. ಕಡಿಮೆ ದರಕ್ಕೆ ಮಾರಾಟ ಮಾಡಿ ಕಾರ್ಮಿಕರಿಗೆ ಅನ್ಯಾಯ ಮಾಡಬೇಡಿ ಎಂದು ಆಗ್ರಹಿಸಿದರು. ವಿಐಎಸ್ಎಲ್ ಕಾರ್ಖಾನೆ ಆಡಳಿತ ಮಂಡಳಿ ವಿರುದ್ಧ ಆಕ್ರೋಶಗೊಂಡರು.
ಗುತ್ತಿಗೆ ಕಾರ್ಮಿಕರ ಸಂಘದ ಕಾರ್ಯದರ್ಶಿ ರಾಕೇಶ್ ಮಾತನಾಡಿ, ಕಾರ್ಖಾನೆಯಲ್ಲಿರುವ ಕಬ್ಬಿಣದ ಸಾಮಾಗ್ರಿಗಳನ್ನು ಕಮ್ಮಿ ಬೆಲೆಗೆ ಗುಜರಿಗೆ ಮಾರಾಟ ಮಾಡುತ್ತಿದ್ದಾರೆ. ಹೆಚ್ಚು ದರಕ್ಕೆ ಕಬ್ಬಿಣದ ಸಾಮಾಗ್ರಿಗಳನ್ನು ಮಾರಾಟ ಮಾಡುವಂತೆ ನಾವು ಆಗ್ರಹಿಸುತ್ತಿದ್ದೇವೆ ಎಂದು ಹೇಳಿದರು.