ಮೈಸೂರು: ಆಷಾಢಮಾಸ 2ನೇ ಶುಕ್ರವಾರ ಚಾಮುಂಡಿ ಬೆಟ್ಟದಲ್ಲಿ ನಾಡದೇವತೆಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಗಿದೆ.ಈ ದಿನ ತಾಯಿ ಚಾಮುಂಡಿ ಭಕ್ತರಿಗೆ ಹಬ್ಬ. ಅದರಲ್ಲೂ ಆಷಾಢದ ಶುಕ್ರವಾರದಲ್ಲಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಮುಂಜಾನೆ 3 ಗಂಟೆಯಿಂದ ಅಭಿಷೇಕ ಆರಂಭವಾಗಿ ಎರಡು ಗಂಟೆಗಳ ಕಾಲ ನಿರಂತರವಾಗಿ ಪೂಜೆ ನಡೆಯಿತ್ತು. ಅಭಿಷೇಕದ ನಂತರ ತಾಯಿ ದೇವಿಗೆ ಲಕ್ಷ್ಮೀ ಅಲಂಕಾರ ಮಾಡಿ ಬಳಿಕ ೫ ಗಂಟೆ ೩೦ ನಿಮಿಷಕ್ಕೆ ಭಕ್ತರ ರ‍್ಶನಕ್ಕೆ ಅನುವು ಮಾಡಿಕೊಡಲಾಯಿತು.
ಇದನ್ನೂ ಓದಿ: ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ
ಖಾಸಗಿ ವಾಹನಗಳ ಪ್ರವೇಶ ನಿಷೇಧ
ಬೆಟ್ಟದ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಬಾರದೆಂದು ಖಾಸಗಿ ವಾಹನಗಳ ಪ್ರವೇಶ ಕೂಡ ನಿಷೇಧಿಸಲಾಗಿದ್ದು, ಬೆಟ್ಟಕ್ಕೆ ಹೋಗಲು ಭಕ್ತರಿಗೆ ಜಿಲ್ಲಾಡಳಿತ50 ಕೆಎಸ್ಆರ್ಟಿಸಿ ಬಸ್ಸಿನ ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ. ನಗರದ ಲಲಿತಾ ಮಹಲ್ ಹೆಲಿಪ್ಯಾಡ್ ಸಮೀಪದಿಂದ ಸಾರ್ವಜನಿಕರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ.
ಆಷಾಢ ಶುಕ್ರವಾರದಂದು ಶಕ್ತಿ ದೇವತೆಯನ್ನು ಪೂಜಿಸಿದವರಿಗೆ ವಿಘ್ನಗಳು ನಿವಾರಣೆಯಾಗಿ ಇಷ್ಟಾರ್ಥ ಸಿದ್ಧಿಸುತ್ತದೆ ಅನ್ನೋ ನಂಬಿಕೆಯಿದೆ. ಈ ನಿಟ್ಟಿನಲ್ಲಿ ಮೈಸೂರು ಮಾತ್ರವಲ್ಲದೆ ಬೇರೆ ಜಿಲ್ಲೆ ಹಾಗೂ ಹೊರ ರಾಜ್ಯದ ಲಕ್ಷಾಂತರ ಭಕ್ತರು ಸಹಾ ೨ನೇ ಆಷಾಢ ಶುಕ್ರವಾರದ ಪೂಜೆಗೆ ಆಗಮಿಸಿದ್ದಾರೆ.