ಚಿಕ್ಕಬಳ್ಳಾಪುರ : ವಿಶ್ವ ವಿಖ್ಯಾತ ನಂದಿ ಗಿರಿಧಾಮ ಹಾಗೂ ಸ್ಕಂದಗಿರಿ ಬೆಟ್ಟಗಳಿಗೆ ಎರಡು ದಿನಗಳ ಕಾಲ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ವಿಧಿಸಲಾಗಿದೆ.
ಜುಲೈ 2 (ನಾಳೆ) ರಂದು ಬೆಳಗ್ಗೆ 6 ರಿಂದ ಜುಲೈ 3 ಸಂಜೆ 6ರ ವರೆಗೂ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜುಲೈ 3ರಂದು ಸರ್.ಎಂ ವಿಶ್ವೇಶ್ವರಯ್ಯ ತವರೂರು ಮುದ್ದೇನಹಳ್ಳಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಅವರು ನಿರ್ಬಂಧ ವಿಧಿಸಿ ಆದೇಶಿಸಿದ್ದಾರೆ.
ಇದನ್ನೂ ಓದಿ : ಸರ್ಕಾರಿ ಕಚೇರಿಗಳಲ್ಲಿ ‘ವಸೂಲಿ’ ಚಿತ್ರೀಕರಣಕ್ಕೆ ನಿರ್ಬಂಧ
ಭದ್ರತಾ ದೃಷ್ಟಿಯಿಂದ ನಿರ್ಬಂಧ
ರಾಷ್ಟ್ರಪತಿ ಭೇಟಿ ಹಿನ್ನೆಲೆ ಭದ್ರತಾ ದೃಷ್ಟಿಯಿಂದ ಎರಡು ದಿನಗಳ ಪ್ರವಾಸಿಗರಿಗೆ ನಿಷೇಧಿಸಲಾಗಿದೆ. ಎರಡು ದಿನಗಳ ಕಾಲ ಗಿರಿ ಧಾಮಗಳತ್ತ ಪ್ರವಾಸಿಗರು ಬಾರದಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.
ನಂದಿ ಗಿರಿಧಾಮ ಮತ್ತು ಸ್ಕಂದಗಿರಿಧಾಮ ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಾಗಿವೆ.