ಚಿಕ್ಕೋಡಿ : ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿಗೊಳಿಸಿ ಮಹಿಳೆಯರಿಗೆ ಫ್ರೀ ಬಸ್ ಪ್ರಯಾಣ ಕಲ್ಪಿಸಿದರೂ ಗ್ರಾಮೀಣ ಪ್ರದೇಶದಲ್ಲಿ ಟಾಪ್ ಪ್ರಯಾಣ ತಪ್ಪಿಲ್ಲ!
ಫ್ರೀ ಬಸ್ ಪ್ರಯಾಣ ಹೊರತಾಗಿಯೂ ಮಹಿಳೆಯರು ಮಹೀಂದ್ರ ಪಿಕಪ್ ವಾಹನದ ಮೇಲೆ ಕುಳಿತು ಪ್ರಯಾಣ ಮಾಡಿರುವ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ.
ಕಬ್ಬೂರು-ಬೆಲ್ಲದ ಬಾಗೇವಾಡಿ ರಸ್ತೆಯಲ್ಲಿ ಮಹಿಳೆಯರು ತರಕಾರಿ ಸಾಗಿಸುತ್ತಿದ್ದ ಮಹೀಂದ್ರ ಪಿಕಪ್ ವಾಹನದ ಮೇಲೆ ಕೂತು ಪ್ರಯಾಣಿಸುತ್ತಿದ್ದರು. ಈ ವೇಳೆ ವಾಹನ ತಡೆದ ಚಿಕ್ಕೋಡಿ ಡಿವೈಎಸ್‌ಪಿ ಸಾವಿನ ಸವಾರಿ ಮಾಡುತ್ತಿದ್ದ ಚಾಲಕನಿಗೆ ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡರು.
ಇದನ್ನೂ ಓದಿ : ನನ್ನ ಹೆಂಡತಿಗೂ ಬಸ್ ಪ್ರಯಾಣ ಉಚಿತ : ಸಿಎಂ ಸಿದ್ದರಾಮಯ್ಯ
ಚಾಲಕನ ವಿರುದ್ಧ ಕ್ರಮಕ್ಕೆ ಸೂಚನೆ
ಮಹೀಂದ್ರ ಪಿಕಪ್ ವಾಹನದ ಮೇಲೆ ಯಾವುದೇ ಭಯವಿಲ್ಲದೆ ಪ್ರಯಾಣ ಮಾಡುತ್ತಿದ್ದನ್ನು ನೋಡಿ ಕೆರಳಿದ ಬಸವರಾಜ ಯಲಿಗಾರ, ಚಾಲಕನ ವಿರುದ್ಧ ಪ್ರಕರಣ ದಾಖಲಿಸುವಂತೆ ತಾಕೀತು ಮಾಡಿದರು. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಒಂದೆಡೆ, ಫ್ರೀ ಬಸ್ ಪ್ರಯಾಣ ಜಾರಿಯಿಂದ ಮಹಿಳೆಯರು ಹೆಚ್ಚು ಉಪಯೋಗ ಪಡೆದುಕೊಳ್ಳುತ್ತಿದ್ದಾರೆ. ಇತ್ತ, ಅಷ್ಟೇ ಅನಾಹುತಗಳು ಕೂಡ ಸಂಭವಿಸುತ್ತಿವೆ. ಬಸ್ ಫುಲ್ ರಶ್ ಆಗುತ್ತಿರುವುದರಿಂದ ಪುರುಷ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳು ಸಮಸ್ಯೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರ ಹಾಗೂ ಸಾರಿಗೆ ಇಲಾಖೆ ಗಮನಹರಿಸಬೇಕಿದೆ.