Friday, November 22, 2024

ಮೈಶುಗರ್ ಕಾರ್ಖಾನೆಯಲ್ಲಿ ಕಬ್ಬು ಅರೆಯುವ ಕಾರ್ಯ ಇಂದಿನಿಂದ ಆರಂಭ : ಸಚಿವ ಶಿವಾನಂದ ಪಾಟೀಲ್

ಮಂಡ್ಯ: ಮಂಡ್ಯ ಜಿಲ್ಲೆಯ ರೈತರ ಜೀವನಾಡಿಯಾಗಿರುವ ಮೈಶುಗರ್ ಕಾರ್ಖಾನೆಯಲ್ಲಿ ಇಂದಿನಿಂದ ಕಬ್ಬು ಅರಿಯುವಿಕೆ ಆರಂಭವಾಗಲಿದೆ.

 ಮೈ ಶುಗರ್ ಕಾರ್ಖಾನೆಯಲ್ಲಿ ಕಬ್ಬು ನುರಿಸುವ ಕಾರ್ಯಕ್ಕೆ ಇಂದು ಚಾಲನೆ ಸಿಗಲಿದೆ. ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್, ಅಧಿಕಾರಕ್ಕೆ ಬಂದ ತಕ್ಷಣ ಮೈಶುಗರ್ ಕಾರ್ಖಾನೆ ಪುನರಾರಂಭ ಮಾಡ್ತೀವಿ ಎಂದು ಭರವಸೆ ನೀಡಿತ್ತು. ನೀಡಿದ್ದ ಭರವಸೆಯಂತೆ ಅಧಿಕಾರಕ್ಕೆ ಬಂದ ಒಂದು ವಾರದಲ್ಲೇ ಕಾರ್ಖಾನೆ ಅಚ್ಚುಕಟ್ಟು ಮಾಡಲು 50 ಕೋಟಿ ಬಿಡುಗಡೆ ಮಾಡಿತ್ತು. ಅನುದಾನ ಬಿಡುಗಡೆ ಮಾಡಿದ್ದ ಒಂದು ವಾರದಲ್ಲೇ ಕಾರ್ಖಾನೆಯ ಬಾಯ್ಲರ್​ಗೆ ಅಗ್ನಿ ಸ್ಪರ್ಶ ಕೂಡ ಮಾಡಲಾಗಿದೆ.

ಇದನ್ನೂ ಓದಿ: ಶಿರಾದ ತಾಯಿ ಮಕ್ಕಳ ಆಸ್ಪತ್ರೆ ತಹಶೀಲ್ದಾರ್‌ ಭೇಟಿ : ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲು ಸೂಚನೆ

ಐದು ವರ್ಷಗಳ ನಂತರ ಪೂರ್ಣ ಪ್ರಮಾಣದಲ್ಲಿ ಮೈಶುಗರ್ ಕಾರ್ಖಾನೆ ಕಾರ್ಯಾರಂಭ ಮಾಡುತ್ತಿದ್ದು, ಪ್ರಸಕ್ತ ಸಾಲಿನಲ್ಲಿ 5 ಲಕ್ಷ ಟನ್ ಕಬ್ಬು ನುರಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ಮಂಡ್ಯದ ಮೈ ಶುಗರ್ ಕಾರ್ಖಾನೆ ರಾಜ್ಯದ ಏಕೈಕ ಸರ್ಕಾರಿ ಸ್ವಾಮ್ಯದ ಸಕ್ಕರೆ ಕಾರ್ಖಾನೆಯಾಗಿದೆ.

ಕಬ್ಬು ನುರಿಸುವ ಕಾರ್ಯಕ್ಕೆ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಚಾಲನೆ ನೀಡುವ ಮೂಲಕ ಕಾರ್ಖಾನೆ ಪುನರಾರಂಭಕ್ಕೆ ವಿದ್ಯುಕ್ತ ಚಾಲನೆ ನೀಡಲಿದ್ದಾರೆ. ಇದೇ ಸಮಯದಲ್ಲಿ  ​ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್​​.ಚಲುವರಾಯ ಸ್ವಾಮಿ ಬೆಳಗ್ಗೆ 10 ಗಂಟೆಗೆ ಕಾರ್ಖಾನೆಯಲ್ಲಿ ಕಬ್ಬು ಅರಿಯುವಿಕೆಗೆ ಚಾಲನೆ ನೀಡಲಿದ್ದು, ಕಾರ್ಯಕ್ರಮದಲ್ಲಿ ಮಂಡ್ಯ ಸಂಸದೆ ಸುಮಲತಾ ಕೂಡ ಭಾಗಿಯಾಗಲಿದ್ದಾರೆ.

 

RELATED ARTICLES

Related Articles

TRENDING ARTICLES