ಬೆಂಗಳೂರು : ಅಮರನಾಥ ಯಾತ್ರೆಗೆ ತೆರಳಿದ್ದ ಕರ್ನಾಟಕದ ಯಾತ್ರಿಗಳ ಸುರಕ್ಷಿತವಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮರನಾಥ ಯಾತ್ರೆಗೆ ತೆರಳಿದ್ದ ಕನ್ನಡಿಗರ ನೆರವಿಗೆ ಅಧಿಕಾರಿ ನಿಯೋಜನೆ ಮಾಡಲಾಗಿದೆ ಎಂದರು.
ಉತ್ತರಕಾಂಡದಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆ ಯಾತ್ರಿಗಳು ಸಂಕಷ್ಟದಲ್ಲಿದ್ದಾರೆ. ಮಳೆ ಹಿನ್ನೆಲೆ ಹೆಲಿಕಾಪ್ಟರ್, ವಿಮಾನ ಮೂಲಕ ಕರೆತರಲು ಆಗಲ್ಲ. ಅವರ ನೆರವಿಗಾಗಿ ಐಎಎಸ್ ಅಧಿಕಾರಿ ರಶ್ಮಿ ನಿಯೋಜಿಸಿದ್ದೇವೆ ಎಂದು ತಿಳಿಸಿದರು.
ಇದನ್ನೂ ಓದಿ : ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ಸಿಗರು ಅಪ್ರಬುದ್ಧರು : ಪ್ರಲ್ಹಾದ್ ಜೋಶಿ
ಮಳೆ ಕಡಿಮೆ ಬಳಿಕ ರಕ್ಷಣಾ ಕಾರ್ಯ
ಉತ್ತರ ಕಾಂಡ ರೀಜನಲ್ ಕಮಿಷನ್, ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಬೆಟ್ಟ ಗುಡ್ಡಗಳ ಕಡಿದಾದ ಪ್ರದೇಶದಲ್ಲಿ ಯಾತ್ರಿಕರು ಸಿಲುಕಿದ್ದಾರೆ. ಮಳೆ ಕಡಿಮೆ ಬಳಿಕ ರಕ್ಷಣಾ ಕಾರ್ಯ ನಡೆಯಲಿದೆ. ಸದ್ಯ ಕರ್ನಾಟಕದ ಯಾತ್ರಿಕರು ಸುರಕ್ಷಿತವಾಗಿದ್ದಾರೆ ಎಂದು ಮಾಹಿತಿ ನೀಡಿದರು.
80 ಮಂದಿ ಕನ್ನಡಿಗರು
ಗದಗದಿಂದ ತೆರಳಿರುವ 23 ಮಂದಿ ಸೇರಿ ಒಟ್ಟು 80 ಮಂದಿ ಕನ್ನಡಿಗರು ಅಮರನಾಥ ಮಂದಿರದಿಂದ 6 ಕಿ.ಮೀ ದೂರದಲ್ಲಿರುವ ಪಂಚತಾರ್ನಿ ಟೆಂಟ್ ನಲ್ಲಿ ಸಿಲುಕಿದ್ದಾರೆ ಎನ್ನುವ ಮಾಹಿತಿ ಲಭ್ಯವಿದೆ. ಈ ಹಿನ್ನಲೆಯಲ್ಲಿ ಕೂಡಲೇ ರಕ್ಷಣಾ ಕಾರ್ಯ ಕೈಗೊಂಡು, ಎಲ್ಲರನ್ನೂ ಸುರಕ್ಷಿತವಾಗಿ ವಾಪಸು ಕರೆತರುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.