Friday, November 22, 2024

ಅನ್ನಭಾಗ್ಯ ಯೋಜನೆಯ ನಗದು ವರ್ಗಾವಣೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು: ಕಾಂಗ್ರೆಸ್​ ಮಹತ್ವಾಕಾಂಕ್ಷೆಯುಳ್ಳ ಕಾಂಗ್ರೆಸ್​ ಗ್ಯಾರಂಟಿಯಲ್ಲಿ ಒಂದಾದ  ‘ಅನ್ನಭಾಗ್ಯ’ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ‘

ಹೌದು, ಬಡಕುಟುಂಬದ ಪ್ರತಿ ವ್ಯಕ್ತಿಗೆ ತಲಾ 5 ಕೆ.ಜಿ ಅಕ್ಕಿ ಹಾಗೂ ತಲಾ 170 ರೂ. ನಗದು ವರ್ಗಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಅಧೀಕೃತ ಮುದ್ರೆ ಒತ್ತಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ‘ಅನ್ನಭಾಗ್ಯ’ ಯೋಜನೆಯಡಿ 170 ರೂಪಾಯಿ ನಗದು ವರ್ಗಾವಣೆಗೆ ಚಾಲನೆ ನೀಡಿಮಾತನಾಡಿದ ಸಿಎಂ ಸಿದ್ದರಾಮಯ್ಯ ನಮ್ಮ 5 ಗ್ಯಾರಂಟಿಗಳಲ್ಲಿ ಪ್ರಮುಖವಾದದ್ದು ಅನ್ನಭಾಗ್ಯ ಯೋಜನೆಯನ್ನು ರಾಜ್ಯದ 4.42 ಕೋಟಿ ಜನರಿಗೆ ಉಚಿತವಾಗಿ ಅಕ್ಕಿ ಕೊಡುತ್ತಿದ್ದೇವೆ ಎಂದರು.

ಇದನ್ನೂ ಓದಿ: ಅಕ್ಕಿ ಸಿಗದಿದ್ರೆ ಮುಂದಿನ ತಿಂಗಳೂ ದುಡ್ಡು ಕೊಡ್ತೀವಿ : ಸಿದ್ದರಾಮಯ್ಯ

ಮುಂದಿನ 15 ದಿನಗಳಲ್ಲಿ 1.28 ಕೋಟಿ ಪಡಿತರ ಕುಟುಂಬಗಳಿಗೆ ನೇರವಾಗಿ ನಗದು ವರ್ಗಾವಣೆ ಆಗಲಿದೆ. ಈ ಯೋಜನೆಗ ಅನುಷ್ಠಾನಕ್ಕಾಗಿ ಪ್ರಸ್ತುತ ಬಜೆಟ್‌ನಲ್ಲಿ 10 ಸಾವಿರ ಕೋಟಿ ಹಣ ನಿಗದಿ ಮಾಡಲಾಗಿದೆ ಎಂದಿದ್ದಾರೆ.

‘ಅನ್ನಭಾಗ್ಯ’ ಯೋಜನೆಯಡಿ ಬಡಕುಟುಂಬದ ಪ್ರತಿ ವ್ಯಕ್ತಿಗೆ ತಲಾ 10 ಕೆಜಿ ಅಕ್ಕಿ ನೀಡುವುದಾಗಿ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆಗಳನ್ನು ಘೋಷಿಸಿತ್ತು. ಅದರಂತೆ ಸಿದ್ದರಾಮಯ್ಯ ಅವರು 10 ಕೆಜಿ ಅಕ್ಕಿ ನೀಡಲು ಮುಂದಾಗಿದ್ದರು. ಆದರೆ ಕೇಂದ್ರ ಸರ್ಕಾರ ಅಕ್ಕಿ ಪೂರೈಕೆ ಮಾಡದ ಹಿನ್ನೆಲೆಯಲ್ಲಿ ಹೆಚ್ಚುವರಿ 5 ಕೆ.ಜಿ ಅಕ್ಕಿಯ ಬದಲಿಗೆ ಹಣ ನೀಡುವುದಾಗಿ ಘೋಷಿಸಿದ್ದರು.ನಾವು ನುಡಿದಂತೆ ನಡೆದಿದ್ದೇವೆ ಎಂದರು.
ಈ ಹಣವನ್ನು ಆಹಾರ ಪದಾರ್ಥಗಳ ಖರೀದಿಗೆ ಮಾತ್ರ ಬಳಕೆ ಮಾಡಬೇಕೆಂದು ನಾಡ ಬಾಂಧವರಲ್ಲಿ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

RELATED ARTICLES

Related Articles

TRENDING ARTICLES