ಉಡುಪಿ : ಬೆಳಗ್ಗೆ 90, ಸಂಜೆ 90 ಉಚಿತವಾಗಿ ಮದ್ಯ ನೀಡಿ. ಇಲ್ಲದಿದ್ದಲ್ಲಿ ಸಾರಾಯಿಯನ್ನು ಬಂದ್ ಮಾಡಿ ಎಂದು ಕೂಲಿ ಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ.
ಉಡುಪಿಯ ಚಿತ್ತರಂಜನ್ ಸರ್ಕಲ್ ನಲ್ಲಿ ವಿನೂತನ ರೀತಿಯಲ್ಲಿ ಕೂಲಿ ಕಾರ್ಮಿಕರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಆ ಮೂಲಕ ಉಚಿತ ಮದ್ಯ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಉಡುಪಿ ಜಿಲ್ಲಾ ನಾಗರಿಕ ಸಮಿತಿ, ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಮದ್ಯದ ಬಾಟಲು ಇಟ್ಟು ಹೂವು ಹಾಕಿ ಪೂಜೆಯನ್ನೂ ಮಾಡಿದ್ದಾರೆ.
ಇದನ್ನೂ ಓದಿ : ಮದ್ಯ ಪ್ರಿಯರಿಗೆ ಬಿಗ್ ಶಾಕ್ : ಬಿಯರ್ ಮೇಲೆ ಇನ್ಮುಂದೆ ದುಬಾರಿ
ಬಜೆಟ್ನಲ್ಲಿ ಮದ್ಯದ ಬೆಲೆಯನ್ನು ಸರ್ಕಾರ ಏರಿಕೆ ಮಾಡಿದೆ. ಸರ್ಕಾರದ ಉಚಿತ ಯೋಜನೆಗೆ ಹಣ ನಮ್ಮಿಂದಲೇ ಬರುವುದು. ನಮಗೆ ಮದ್ಯದ ಬೆಲೆ ಇಳಿಕೆ ಮಾಡಿ. ಇಲ್ಲದಿದ್ದಲ್ಲಕ ಬೆಳಗ್ಗೆ 90, ಸಂಜೆ 90 ಉಚಿತವಾಗಿ ನೀಡಿ ಎಂದು ಒತ್ತಾಯಿಸಿದ್ದಾರೆ.
ಮದ್ಯ ಕೊಡಿ, ಇಲ್ಲದಿದ್ದಲ್ಲಿ ಸಾರಾಯಿಯನ್ನು ಬಂದ್ ಮಾಡಿ. ಆ ಹಣವನ್ನು ನಾವು ನಮ್ಮ ಹೆಂಡತಿ, ಮಕ್ಕಳಿಗೆ ನಿಡುತ್ತೇವೆ. ನಮ್ಮ ಹೆಂಡತಿ, ಮಕ್ಕಳನ್ನು ನಾವೇ ಹಣ ಕೊಟ್ಟು ದೇವಸ್ಥಾನಗಳಿಗೆ ಕರೆದುಕೊಂಡು ಹೋಗುತ್ತೇವೆ ಎಂದು ಆಕ್ರೋಶ ಹೊರಹಾಕಿದ್ದಾರೆ.