ಬೆಂಗಳೂರು : ವೆಸ್ಟ್ ಇಂಡೀಸ್ ವಿರುದ್ಧ ಡೊಮಿನಿಕಾದ ವಿಂಡ್ಸರ್ ಪಾರ್ಕ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಅಮೋಘ ಗೆಲುವು ದಾಖಲಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು ಮೊದಲ ಇನಿಂಗ್ಸ್ನಲ್ಲಿ ಕೇವಲ 150 ರನ್ಗಳಿಗೆ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಇನ್ನಿಂಗ್ಸ್ ಆರಂಭಿಸಿದ ಭಾರತ ಅಮೋಘ ಆಟ ಪ್ರದರ್ಶಿಸಿತು.
ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ಹಾಗೂ ನಾಯಕ ರೋಹಿತ್ ಶರ್ಮಾ ಅವರ ಶತಕದೊಂದಿಗೆ ಟೀಂ ಇಂಡಿಯಾ ಮೊದಲ ಇನಿಂಗ್ಸ್ನಲ್ಲಿ 5 ವಿಕೆಟ್ ನಷ್ಟಕ್ಕೆ 421 ರನ್ಗಳಿಸಿ ಡಿಕ್ಲೇರ್ ಘೋಷಿಸಿತು. ದ್ವಿತೀಯ ಇನಿಂಗ್ಸ್ ಆರಂಭಿಸಿದ ವೆಸ್ಟ್ ಇಂಡೀಸ್ ಮತ್ತೆ ವಿಫಲವಾಯಿತು.
ಇದನ್ನೂ ಓದಿ : ದಾಖಲೆಗಳ ‘ಚಾಂಪಿಯನ್ ಧೋನಿ’ : ಸಚಿನ್ ದಾಖಲೆಯೂ ಉಡೀಸ್..!
141 ರನ್ಗಳ ಅಮೋಘ ಗೆಲುವು
ರವಿಚಂದ್ರನ್ ಅಶ್ವಿನ್ ಅವರ ಸ್ಪಿನ್ ಮೋಡಿಗೆ ವಿಂಡೀಸ್ ಬ್ಯಾಟರ್ಗಳು ಪೆವಿಲಿಯನ್ ಪೆರೇಡ್ ನಡೆಸಿದರು. ಕೇವಲ 71 ರನ್ ನೀಡಿ 7 ವಿಕೆಟ್ ಕಬಳಿಸಿ ಅಶ್ವಿನ್, ವೆಸ್ಟ್ ಇಂಡೀಸ್ ತಂಡವನ್ನು 130 ರನ್ಗಳಿಗೆ ಆಲೌಟ್ ಮಾಡಿದ್ದಾರೆ. ಈ ಮೂಲಕ ಟೀಂ ಇಂಡಿಯಾ ಇನಿಂಗ್ಸ್ ಹಾಗೂ 141 ರನ್ಗಳ ಅಮೋಘ ಗೆಲುವು ದಾಖಲಿಸಿತು.
ವಿಶೇಷ ದಾಖಲೆ ಬರೆದ ಭಾರತ
ಈ ಗೆಲುವಿನೊಂದಿಗೆ 5 ತಂಡಗಳ ವಿರುದ್ಧ 22ಕ್ಕೂ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಗೆದ್ದ ವಿಶೇಷ ದಾಖಲೆಯನ್ನು ಟೀಂ ಇಂಡಿಯಾ ತನ್ನದಾಗಿಸಿಕೊಂಡಿತು. ಆಸ್ಟ್ರೇಲಿಯಾ (32), ಇಂಗ್ಲೆಂಡ್ (31), ವೆಸ್ಟ್ ಇಂಡೀಸ್ (23), ನ್ಯೂಜಿಲೆಂಡ್ (22) ಹಾಗೂ ಶ್ರೀಲಂಕಾ (22) ಇಪ್ಪತ್ತಕ್ಕೂ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಗೆದ್ದಿದೆ.