ಬೆಂಗಳೂರು : ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಬಿಎಂಟಿಸಿ ಯೂ ಸಿಹಿಸುದ್ದಿ ನೀಡಿದ್ದು, ಬಸ್ ಪಾಸ್ ಮಾನ್ಯತೆ ಅವಧಿಯನ್ನು ವಿಸ್ತರಿಸಿ ಆದೇಶಿಸಿದೆ.
ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಮಾವನನ್ನೇ ಕೊಂದ ಅಳಿಯ
2022-23ನೇ ಸಾಲಿನ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ವಿತರಿಸಲಾಗಿದ್ದ ವಿದ್ಯಾರ್ಥಿ ಬಸ್ ಪಾಸ್ಗಳ ಅವಧಿಯನ್ನು ಜುಲೈ 31 ರವರೆಗೆ ವಿಸ್ತರಿಸಿದ ಬಿಎಂಟಿಸಿ ಆದೇಶ ಹೊರಡಿಸಿದೆ. ಕಳೆದ ವರ್ಷದ ಹಳೆಯ ಬಸ್ ಪಾಸ್ ಅಥವಾ ಕಾಲೇಜು ಶುಲ್ಕ ರಸೀದಿ ತೋರಿಸಿ ವಿದ್ಯಾರ್ಥಿಗಳು ಉಚಿತ ಪ್ರಯಾಣ ಮಾಡಬಹುದಾಗಿದೆ.
1 ರಿಂದ 12 ನೇ ತರಗತಿ ವಿದ್ಯಾರ್ಥಿಗಳು, ಸ್ನಾತಕೋತ್ತರ ಸಂಜೆ ಕಾಲೇಜು ವಿದ್ಯಾರ್ಥಿಗಳು, ಪಿ ಹೆಚ್ ಡಿ ವಿದ್ಯಾರ್ಥಿಗಳು ಈ ಸೌಲಭ್ಯ ಪಡೆಯಬಹುದಾಗಿದೆ.
ಇನ್ನೂ 2023-24 ಸೇ ಸಾಲಿನ ವಿದ್ಯಾರ್ಥಿಗಳಿಗೆ ಹೊಸ ಪಾಸ್ ಗಳನ್ನು ಜುಲೈ 7 ರಿಂದ ಆರಂಭಿಸಿದ್ದು ಆನ್ ಲೈನ್ ಮತ್ತು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.