ಬೆಂಗಳೂರು : ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹೀನಾಯ ಸೋಲಿನ ಬೆನ್ನಲ್ಲೇ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ.
15 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ ಎರಡು ಸ್ಥಾನಗಳನ್ನು ಮಾತ್ರ ಗೆದ್ದಿದ್ದೆ. ಇದರಿಂದ ಸೋಲಿನ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ತಮ್ಮ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಉಪಚುನಾವಣೆಯ ಫಲಿತಾಂಶದ ಬಳಿಕ ಸುದ್ದಿಗೋಷ್ಠಿ ನಡೆಸಿ ರಾಜೀನಾಮೆ ಘೋಷಿಸಿದ್ದಾರೆ.
ತಾವು ಮುಖ್ಯಮಂತ್ರಿಯಾಗಿದ್ದ ದಿನಗಳಲ್ಲಿ ರಾಜ್ಯದ ಜನರಿಗಾಗಿ ಹಲವು ಭಾಗ್ಯಗಳನ್ನು ಘೋಷಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸಿದ್ದರಾಮಯ್ಯ ಆಪ್ತರ ಬಳಿ ಅಸಮಧಾನ ಹೊರಹಾಕಿದ್ದರು ಎನ್ನಲಾಗಿದೆ.
ಇತ್ತ ರಾಜೀನಾಮೆಗೆ ನಿರ್ಧರಿಸಿದ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಮುಖಂಡರು ಫೋನ್ ಕರೆ ಮೂಲಕ ಮನವೋಲಿಸುವ ಪ್ರಯತ್ನ ಮಾಡಿದ್ದರೂ ಪ್ರಯೋಜನವಾಗಿಲ್ಲ ಎಂಬ ಮಾಹಿತಿಗಳು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. 15 ಕ್ಷೇತ್ರಗಳಲ್ಲಿ ನಡೆದಿದ್ದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಶಿವಾಜಿನಗರ ಮತ್ತು ಹುಣಸೂರು ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಗೆಲುವನ್ನು ಸಾಧಿಸಿದೆ.