Friday, November 22, 2024

ಜು.21ಕ್ಕೆ ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿವಿ 8ನೇ ಘಟಿಕೋತ್ಸವ

ಶಿವಮೊಗ್ಗ : ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವ ಸಮಾರಂಭ ಜುಲೈ 21 ರಂದು ನಡೆಯಲಿದೆ ಎಂದು ವಿವಿ ಕುಲಪತಿ ಡಾ.ಆರ್.ಸಿ ಜಗದೀಶ್ ತಿಳಿಸಿದರು.

ವಿವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಇರುವಕ್ಕಿಯಲ್ಲಿರುವ ವಿವಿ ಆವರಣದಲ್ಲಿ ಈ ಘಟಿಕೋತ್ಸವ ಸಮಾರಂಭ ನಡೆಯಲಿದೆ ಎಂದು ಹೇಳಿದರು.

ರಾಜ್ಯಪಾಲ ಹಾಗೂ ವಿಶ್ವವಿದ್ಯಾಲಯದ ಕುಲಾದಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು, ಪದವೀಧರರಿಗೆ ಪದವಿ ಪ್ರಧಾನ ಮಾಡಲಿದ್ದಾರೆ. ಕೃಷಿ ಸಚಿವ ಹಾಗೂ ವಿವಿ ಸಹ-ಕುಲಾದಿಪತಿ ಎನ್. ಚಲುವರಾಯಸ್ವಾಮಿ ಗೌರವ ಉಪಸ್ಥಿತರಿರಲಿದ್ದಾರೆ. ಪದ್ಮವಿಭೂಷಣ ಪ್ರಶಸ್ತಿ ವಿಜೇತರು ಹಾಗೂ ರಾಜ್ಯಸಭಾ ಸದಸ್ಯರಾದ ಡಾ. ವೀರೇಂದ್ರ ಹೆಗ್ಗಡೆ ಅವರು 8ನೇ ಘಟಿಕೋತ್ಸವ ಭಾಷಣ ಮಾಡಲಿದ್ದಾರೆಂದು ಅವರು ತಿಳಿಸಿದರು.

ಇದನ್ನೂ ಓದಿ : ವೃಕ್ಷಮಾತೆ ತುಳಸಿಗೌಡಗೆ ಗೌರವ ಡಾಕ್ಟರೇಟ್ ಘೋಷಣೆ

37 ಚಿನ್ನದ ಪದಕ ವಿತರಣೆ

ಈ ಘಟಿಕೋತ್ಸವದಲ್ಲಿ  409 ವಿದ್ಯಾರ್ಥಿಗಳು ಕೃಷಿ, ತೋಟಗಾರಿಕೆ, ಅರಣ್ಯ ವಿಭಾಗಗಳಲ್ಲಿ ಪದವಿ, 101 ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಹಾಗೂ 23 ವಿದ್ಯಾರ್ಥಿಗಳು ಪಿ.ಹೆಚ್ಡಿ, ಪದವಿ ಪಡೆಯುತ್ತಿದ್ದಾರೆ. ಇವರಲ್ಲಿ 8 ಪದವಿ ವಿದ್ಯಾರ್ಥಿಗಳು ಚಿನ್ನದ ಪದಕಕ್ಕೆ ಭಾಜನರಾಗಿದ್ದು ಇವರಿಗೆ ಒಟ್ಟು 15 ಚಿನ್ನದ ಪದಕಗಳನ್ನು ನೀಡಲಾಗುವುದು. 14 ಎಂ.ಎಸ್ಸಿ ವಿದ್ಯಾರ್ಥಿಗಳು, 7 ಪಿಹೆಚ್ಡಿ ವಿದ್ಯಾರ್ಥಿಗಳು ಚಿನ್ನದ ಪದಕಕ್ಕೆ ಭಾಜನರಾಗಿದ್ದು ಒಟ್ಟು 37 ಚಿನ್ನದ ಪದಕಗಳನ್ನು ನೀಡಲಾಗುವುದು ಎಂದರು.

3 ಭತ್ತದ ತಳಿಗಳನ್ನು ಬಿಡುಗಡೆ

ವಿವಿಯಲ್ಲಿ ಈ ವರ್ಷ 3 ಭತ್ತದ ತಳಿಗಳನ್ನು ಬಿಡುಗಡೆ ಮಾಡಲಾಗಿದೆ. ವಲಯ 7ಕ್ಕೆ ಸೂಕ್ತವಾದ ಅಧಿಕ ಇಳುವರಿ ಕೊಡುವ ಸಹ್ಯಾದ್ರಿ, ಸಿರಿ, ಗುಡ್ಡಗಾಡು ತಗ್ಗು ಪ್ರದೇಶಕ್ಕೆ ಸೂಕ್ತವಾದ ಸಹ್ಯಾದ್ರಿ ಜಲಮುಕ್ತಿ ಹಾಗೂ ಕರಾವಳಿ ಭಾಗದ ಮಜಲು ಹಾಗೂ ಬೆಟ್ಟು ಗದ್ದೆಗಳಲ್ಲಿ ಮುಂಗಾರಿನಲ್ಲಿ ಬೆಳೆಯಬಹುದಾದ ಸಹ್ಯಾದ್ರಿ, ಸಪ್ತಮಿ ತಳಿಗಳು ಆ ಭಾಗದ ರೈತರಿಗೆ ಆಶಾಕಿರಣಗಳಾಗಿವೆ ಎಂದು ಹೇಳಿದರು.

RELATED ARTICLES

Related Articles

TRENDING ARTICLES