Thursday, October 31, 2024

‘ಗೃಹಲಕ್ಷ್ಮೀ ನಕಲಿ’ ನೋಂದಣಿ ಪತ್ರ ಮಾರಾಟ

ಚಿಕ್ಕಮಗಳೂರು : ರಾಜ್ಯದಲ್ಲಿ ಗೃಹಲಕ್ಷ್ಮೀ ಯೋಜನೆ ಜಾರಿಯಾಗುವ ಮುನ್ನವೇ ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ನಕಲಿ ಅರ್ಜಿಗಳು ಮಾರಾಟವಾಗುತ್ತಿವೆ.

ಈ ಬಗ್ಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದು, ನಕಲಿ ನೋಂದಣಿ ಪತ್ರ ಮಾರಾಟ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಭಾವಚಿತ್ರವಿರುವ ನಕಲಿ ಅರ್ಜಿಗಳನ್ನು ಶೃಂಗೇರಿ ಸೇರಿದಂತೆ ಜಿಲ್ಲೆಯ ವಿವಿಧೆಡೆ ಸೈಬರ್ ಸೆಂಟರ್ ಗಳಲ್ಲಿ 100 ರೂ.ಗೆ ಮಾರಾಟ ಮಾಡಲಾಗುತ್ತಿದೆ.

ಇದನ್ನೂ ಓದಿ : ಕನ್ನಡ ಪಾಠ ನಿಲ್ಲಿಸಿದ್ದೇ ಆದಲ್ಲಿ ಬೃಹತ್ ಪ್ರತಿಭಟನೆ : ಕರವೇ ಪ್ರವೀಣ್ ಶೆಟ್ಟಿ

ನಕಲಿ ಪತ್ರದಲ್ಲಿ ಫಲಾನುಭವಿಗಳ ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆ ಸಂಖ್ಯೆ, ಪಡಿತರ ಚೀಟಿ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆಯ ವಿವರಗಳನ್ನು ಕೇಳಲಾಗಿದೆ. ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಶೃಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನೆ ಕುರಿತು ತನಿಖೆ ನಡೆಸುವಂತೆ ಕಾಂಗ್ರೆಸ್ ಕಾರ್ಯಕರ್ತರು ಶೃಂಗೇರಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದ್ದಾರೆ.

RELATED ARTICLES

Related Articles

TRENDING ARTICLES