ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸದನದಲ್ಲಿ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಆರೋಗ್ಯ ವಿಚಾರಿಸಿದರು.
ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಯಲ್ಲಿ ಶಾಸಕ ಯತ್ನಾಳ್ಗೆ ಚಿಕಿತ್ಸೆ ನೀಡಲಾಗಿದೆ. ಈ ವೇಳೆ ಆಸ್ಪತ್ರೆಗೆ ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಸಚಿವರಾದ ಸಿ.ಟಿ ರವಿ, ಡಾ.ಸಿ.ಎನ್ ಅಶ್ವತ್ಥನಾರಾಯಣ, ಎನ್ ರವಿಕುಮಾರ್ ಸೇರಿದಂತೆ ಬಿಜೆಪಿ ನಾಯಕರು ಆರೋಗ್ಯ ವಿಚಾರಿಸಿದರು.
ವಿಧಾನಸೌಧದಲ್ಲಿ ಇಂದು ನಡೆದ ಗದ್ದಲದ ನಡುವೆ ಅಸ್ವಸ್ಥಗೊಂಡು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಪಕ್ಷದ ಶಾಸಕರಾದ ಶ್ರೀ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಲಾಯಿತು. ಶೀಘ್ರದಲ್ಲಿ ಪೂರ್ಣ ಗುಣಮುಖರಾಗಿ ಚೇತರಿಸಿಕೊಳ್ಳುವಂತೆ ಹಾರೈಸಲಾಯಿತು. pic.twitter.com/4MEZnpuVNy
— B.S.Yediyurappa (@BSYBJP) July 19, 2023
ಈ ಕುರಿತು ಪ್ರತಿಕ್ರಿಯಿಸಿರುವ ಬಿ.ಎಸ್ ಯಡಿಯೂರಪ್ಪ ಅವರು, ವಿಧಾನಸೌಧದಲ್ಲಿ ಇಂದು ನಡೆದ ಗದ್ದಲದ ನಡುವೆ ಅಸ್ವಸ್ಥಗೊಂಡು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಪಕ್ಷದ ಶಾಸಕ ಯತ್ನಾಳ್ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಲಾಯಿತು. ಶೀಘ್ರದಲ್ಲಿ ಪೂರ್ಣ ಗುಣಮುಖರಾಗಿ ಚೇತರಿಸಿಕೊಳ್ಳುವಂತೆ ಹಾರೈಸಲಾಯಿತು ಎಂದಿದ್ದಾರೆ.
ದೊಡ್ಡ ಅನಾಹುತದಿಂದ ತಪ್ಪಿಸಿಕೊಂಡಿದ್ದಾರೆ
ಯತ್ನಾಳ್ ಆರೋಗ್ಯ ವಿಚಾರಣೆ ಬಳಿಕ ಮಾತನಾಡಿದ ಬಿ.ಎಸ್ ಯಡಿಯೂರಪ್ಪ ಅವರು, ಬಸವನಗೌಡ ಪಾಟೀಲ್ ಯತ್ನಾಳ್ರ ಆರೋಗ್ಯ ವಿಚಾರಿಸಲು ಬಂದಿದ್ದೆ. ನಾಳೆ ಅಥವಾ ನಾಡಿದ್ದರಲ್ಲಿ ಮನೆಗೆ ಕಳಿಸಿಕೊಡಲಾಗುತ್ತದೆ ಅಂತ ವೈದ್ಯರು ಹೇಳಿದ್ದಾರೆ. ದೊಡ್ಡ ಅನಾಹುತದಿಂದ ತಪ್ಪಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.