ಬೆಂಗಳೂರು : ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಶಿಕಾರಿಪುರ ಬಿಜೆಪಿ ಶಾಸಕ ಬಿ.ವೈ ವಿಜಯೇಂದ್ರ ಅವರು ಭೇಟಿಯಾಗಿದ್ದಾರೆ.
ನಿನ್ನೆಯಷ್ಟೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಲೋಕಸಭೆ ಚುನಾವಣೆಗೆ ಕೆಲವು ತಿಂಗಳು ಬಾಕಿ ಇರುವಂತೆ ಹಾಗೂ ರಾಜ್ಯ ವಿಪಕ್ಷ ನಾಯಕರ ಆಯ್ಕೆ ಪ್ರಕ್ರಿಯೆ ನಡುವೆ ವಿಜಯೇಂದ್ರ ಅವರ ಈ ಭೇಟಿ ತೀವ್ರ ಕುತೂಹಲ ಕೆರಳಿಸಿದೆ.
ಸಂಘಟನಾ ಚಾತುರ್ಯದ ಚಾಣಕ್ಯನೆಂದೇ ಬಣ್ಣಿಸಲ್ಪಡುವ ಮಾನ್ಯ ಗೃಹ ಸಚಿವ @AmitShah ಜೀ ಅವರನ್ನು ಭೇಟಿಮಾಡಲಾಯಿತು. ರಾಜ್ಯದಲ್ಲಿ ವೈಫಲ್ಯದ ಗ್ಯಾರಂಟಿ ಬೆನ್ನಿಗಂಟಿಸಿಕೊಂಡಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡಲು ಹಾಗೂ ಮುಂದಿನ ಲೋಕಸಭಾ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸುವ ಕುರಿತು ಮಾರ್ಗದರ್ಶನ ಪಡೆಯಲಾಯಿತು. pic.twitter.com/Fb5ewTRBCk
— Vijayendra Yeddyurappa (@BYVijayendra) July 20, 2023
ಬಿಜೆಪಿ ನಾಯಕರ ಭೇಟಿ ಬಗ್ಗೆ ಮಾಹಿತಿ ನೀಡಿದ ವಿಜಯೇಂದ್ರ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧದ ಹೋರಾಟದ ತಂತ್ರಗಾರಿಕೆಯ ರೂಪಿಸಲು ಹಾಗೂ ಲೋಕಸಭೆ ಚುನಾವಣೆಗೆ ಕಾರ್ಯಕರ್ತರನ್ನು ಒಗ್ಗೂಡಿಸುವ ಸಂಬಂಧ ಚರ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಯತ್ನಾಳ್ ಬೇಗ ಗುಣಮುಖರಾಗಲಿ
ಸದನದಲ್ಲಿ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಸಕ ಯತ್ನಾಳ್ ಬೇಗ ಗುಣಮುಖರಾಗಲಿ ಎಂದು ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಹಿರಿಯ ಶಾಸಕ ಯತ್ನಾಳ್ ಅವರು ಆದಷ್ಟು ಬೇಗ ಚೇತರಿಸಿಕೊಂಡು ಸಂಪೂರ್ಣ ಗುಣಮುಖರಾಗಲೆಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಮಾನ್ಯ @JPNadda ಜೀ ಅವರನ್ನು ನಿನ್ನೆಯದಿನ ನವದೆಹಲಿಯಲ್ಲಿ ಭೇಟಿಮಾಡಿ ಆಶೀರ್ವಾದ ಕೋರಲಾಯಿತು.ವಿಧಾನ ಸಭೆ ಹಾಗೂ ಹೊರಗೆ ‘ಕಾಂಗ್ರೆಸ್ ವೈಫಲ್ಯ ಹಾಗೂ ಜನವಿರೋಧಿ ಕ್ರಮಗಳ’ ವಿರುದ್ಧ ಹೋರಾಟ ರೂಪಿಸುವ ಕುರಿತು ಹಾಗೂ ಲೋಕಸಭಾ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಮಾರ್ಗದರ್ಶನ ಪಡೆಯಲಾಯಿತು. pic.twitter.com/yM4F7CjIf3
— Vijayendra Yeddyurappa (@BYVijayendra) July 20, 2023