ಬೆಂಗಳೂರು : ಟೀಂ ಇಂಡಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಈಗಾಗಲೇ ಟೀಂ ಇಂಡಿಯಾ ಮೊದಲ ಪಂದ್ಯವನ್ನು ಗೆದ್ದು, ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಇಂದಿನ ಪಂದ್ಯ ಗೆಲ್ಲುವ ಮೂಲಕ ಸರಣಿ ವಶಪಡಿಸಿಕೊಳ್ಳುವ ತವಕದಲ್ಲಿದೆ.
ಮತ್ತೊಂದೆಡೆ, ಮೊದಲ ಪಂದ್ಯದ ಸೋಲಿಗೆ ಪ್ರತಿಕಾರ ತೀರಿಸಿಕೊಳ್ಳಲು ವಿಂಡೀಸ್ ಹವಣಿಸುತ್ತಿದೆ. ಇಂದಿನ ಪಂದ್ಯವನ್ನು ಗೆದ್ದು ಸರಣಿ ಜೀವಂತವಾಗಿಸಿಕೊಳ್ಳುವತ್ತ ವೆಸ್ಟ್ ಇಂಡೀಸ್ ದೃಷ್ಟಿ ನೆಟ್ಟಿದೆ.
ಭಾರತ ತಂಡ
ಶುಭ್ಮನ್ ಗಿಲ್, ಇಶಾನ್ ಕಿಶನ್(ವಿ.ಕೀ.), ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ (ನಾಯಕ), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್
A look at #TeamIndia's Playing XI for the 2nd ODI!@hardikpandya7 to lead the side today 👌
Follow the match – https://t.co/k4FosiRmuT#WIvIND pic.twitter.com/8wWBzdMrw7
— BCCI (@BCCI) July 29, 2023
ವೆಸ್ಟ್ ಇಂಡೀಸ್
ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಅಲಿಕ್ ಅಥಾನಾಝ್, ಶಾಯ್ ಹೋಪ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ಕೀಸಿ ಕಾರ್ಟಿ, ರೊಮಾರಿಯೋ ಶೆಫರ್ಡ್, ಯಾನಿಕ್ ಕ್ಯಾರಿಯಾ, ಗುಡಕೇಶ್ ಮೋಟಿ, ಅಲ್ಝಾರಿ ಜೋಸೆಫ್, ಜೇಡನ್ ಸೀಲ್ಸ್