Friday, November 22, 2024

ಮಣಿಪುರ ಪ್ರಕರಣ : ಸುಪ್ರೀಂಕೋರ್ಟ್ ತರಾಟೆ ಬಳಿಕ FIRಗಳ ವರ್ಗಾವಣೆ

ಬೆಂಗಳೂರು : ಮಣಿಪುರದಲ್ಲಿ ಮಹಿಳೆಯರ ಮೇಲಿನ ಅಪರಾಧಗಳಿಗೆ ಸಂಬಂಧಿಸಿದ ಎಲ್ಲಾ ಎಫ್​ಐಆರ್​(FIR)ಗಳನ್ನು ಕೇಂದ್ರೀಯ ತನಿಖಾ ದಳಕ್ಕೆ ವರ್ಗಾಯಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

ಕೇಂದ್ರ ಮತ್ತು ಮಣಿಪುರ ಸರ್ಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸುತ್ತಿದ್ದು, ಮಣಿಪುರದ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ರಾಜ್ಯ ಪೊಲೀಸರನ್ನು ಸುಪ್ರೀಂಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು. ನಂತರ ಅಂತಹ ಪ್ರಕರಣಗಳನ್ನು ಕೇಂದ್ರ ತನಿಖಾ ಸಂಸ್ಥೆಗೆ ವರ್ಗಾಯಿಸಲು ಮುಂದಾಗಿದ್ದಾರೆ.

ಎಫ್​ಐಆರ್​(FIR)ಗಳನ್ನು ದಾಖಲಿಸುವಲ್ಲಿ, ಬಂಧನ ಮತ್ತು ಹೇಳಿಕೆಗಳನ್ನು ದಾಖಲಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು  ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ ಹೇಳಿದೆ. ಇದು ಮೇ ಆರಂಭದಿಂದ ಜುಲೈ ಅಂತ್ಯದವರೆಗೆ ಇಲ್ಲಿ ಯಾವುದೇ ಕಾನೂನು ಇರಲಿಲ್ಲ ಎಂಬ ಭಾವನೆಯನ್ನು ಇದು ನ್ಯಾಯಾಲಯಕ್ಕೆ ನೀಡುತ್ತದೆ ಎಂದಿದ್ದಾರೆ.

ರಾಷ್ಟ್ರಪತಿಗೆ ಮಹಿಳಾ ಆಯೋಗ​ ಮಾಹಿತಿ

ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಘರ್ಷಣೆಗೆ ಸಂಬಂಧಿಸಿದಂತೆ ದೆಹಲಿ ಮಹಿಳಾ ಆಯೋಗದ  ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮಧ್ಯಂತರ ವರದಿಗಳನ್ನು ಕಳುಹಿಸಿದ್ದಾರೆ.

ಸ್ವಾತಿ ಮಲಿವಾಲ್, ಜುಲೈ 23ರಂದು ಹಿಂಸೆಯಿಂದ ನಲುಗಿರುವ ಮಣಿಪುರದ ಚುರಾಚಂದ್‌ಪುರ, ಮೊಯಿರಾಂಗ್, ಕಾಂಗ್‌ಪೋಕ್ಪಿ ಮತ್ತು ಇಂಫಾಲ್ ಜಿಲ್ಲೆಗಳನ್ನು ಒಳಗೊಂಡಂತೆ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದರು. 24 ಮಧ್ಯಂತರ ವರದಿಗಳನ್ನು ಮಹಿಳಾ ಆಯೋಗ ರಾಷ್ಟ್ರಪತಿಗಳಿಗೆ ನೀಡಿದೆ.

RELATED ARTICLES

Related Articles

TRENDING ARTICLES