ಬೆಂಗಳೂರು : ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಭಾರತ ಇಂದಿನಿಂದ 5 ಪಂದ್ಯಗಳ ಟಿ-20 ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಈಗಾಗಲೇ ಟೆಸ್ಟ್ ಸರಣಿಯನ್ನು 1-0 ಅಂತರದಿಂದ ಹಾಗೂ ಏಕದಿನ ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡಿರುವ ಟೀಂ ಇಂಡಿಯಾ, ಟಿ-20 ಸರಣಿ ಮೇಲೂ ಕಣ್ಣಿಟ್ಟಿದೆ.
ಇಂದು ಟ್ರಿನಿಡಾಡ್ನ ಬ್ರಿಯನ್ ಲಾರಾ ಸ್ಟೇಡಿಯಂನಲ್ಲಿ ಮೊದಲ ಟಿ-20 ಪಂದ್ಯ ನಡೆಯಲಿದೆ. ರೋಹಿತ್, ವಿರಾಟ್ ಕೊಹ್ಲಿ, ಸಿರಾಜ್, ಜಡೇಜಾ ಅವರಂತಹ ಹಿರಿಯ ಆಟಗಾರರಿಗೆ ಈ ಸರಣಿಯಿಂದ ವಿಶ್ರಾಂತಿ ನೀಡಲಾಗಿದ್ದು, ಹೆಚ್ಚು ಯುವ ಆಟಗಾರರಿಂದಲೇ ಕೂಡಿದೆ.
ಟೆಸ್ಟ್ ಸರಣಿಯಲ್ಲಿ ಅಬ್ಬರಿಸಿದ್ದ ಯಶಸ್ವಿ ಜೈಸ್ವಾಲ್ ಟಿ-20 ಸರಣಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇಶಾನ್ ಕಿಶನ್ ಜೊತೆ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆ ಇದೆ. ಶುಭ್ಮನ್ ಗಿಲ್ ಮೂರನೇ ಕ್ರಮಾಂಕದಲ್ಲಿ ಆಡಬಹುದು. ಸೂರ್ಯಕುಮಾರ್ ಯಾದವ್ ಮಹತ್ವದ ಪಾತ್ರ ವಹಿಸಲಿದ್ದಾರೆ.
It's Match Day!#TeamIndia is all set to play their 200th T20I today!#WIvIND pic.twitter.com/0YICLLrbV5
— BCCI (@BCCI) August 3, 2023
ವಿಕೆಟ್ ಕೀಪರ್ಗಳಾಗಿ ಸಂಜು ಸ್ಯಾಮ್ಸನ್ ಮತ್ತು ತಿಲಕ್ ವರ್ಮಾ ಇದ್ದು ಯಾರಿಗೆ ಸ್ಥಾನ ಎಂಬುದು ನೋಡಬೇಕಿದೆ. ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ನಾಯಕನ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಮತ್ತೊಬ್ಬ ಆಲ್ ರೌಂಡರ್ ಆಗಿ ಅಕ್ಷರ್ ಪಟೇಲ್ ಇದ್ದಾರೆ.