Tuesday, November 5, 2024

ಪಿಒಪಿ ಗಣೇಶ ತಯಾರಿಸಿದರೆ ಕ್ರಮಕ್ಕೆ ಸೂಚನೆ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ಬರಲಿರುವ ಗಣೇಶ ಹಬ್ಬದ ಆಚರಣೆಗೆ ಕಟ್ಟುಮಿಟ್ಟಿನ ಕ್ರಮ ಕೈಗೊಳ್ಳಲು ಸಿದ್ದತೆ ಮಾಡಿಕೊಂಡಿದ್ದು  ಪಿಒಪಿ, ರಾಸಾಯನಿಕ ಬಣ್ಣ ಲೇಪಿತ ಗಣಪತಿ ಮೂರ್ತಿ ತಯಾರಿಕೆ, ಮಾರಾಟ ಮಾಡದಂತೆ ಹಾಗೂ ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಕುರಿತು ಜಾಗೃತಿ ಮೂಡಿಸುವಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ.

ಇದನ್ನೂ ಓದಿ: ಎಸ್‌ಎಸ್‌ಎಲ್ಸಿ ಪರೀಕ್ಷೆ ಅಕ್ರಮ ತಡೆಗೆ ಡ್ರೋನ್​ ಬಳಸಲು ಚಿಂತನೆ

ಪಿಒಪಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವಿಸರ್ಜಿಸುವುದರಿಂದ ಜಲಮೂಲಗಳಿಗೆ ಹಾನಿಯಾಗುತ್ತಿದೆ. ಹೀಗಾಗಿ ಮೂರ್ತಿ ತಯಾರಕರು ಪಿಒಪಿ ಗೌರಿ-ಗಣೇಶ ಮೂರ್ತಿ ತಯಾರಿಸದಂತೆ ಹಾಗೂ ಹೊರರಾಜ್ಯಗಳಿಂದ ರಾಜ್ಯಕ್ಕೆ ಪಿಒಪಿ ಮೂರ್ತಿಗಳು ಬರದಂತೆ ತಡೆಯಬೇಕು.

ಜತೆಗೆ ಮಣ್ಣಿನ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವಂತೆ ಜನರನ್ನೂ ಪ್ರೇರೇಪಿಸಬೇಕು. ಗಣಪತಿ ಮಂಟಪ ಅಲಂಕಾರಕ್ಕೆ ಪ್ಲಾಸ್ಟಿಕ ತೋರಣ ಸೇರಿದಂತೆ ಮತ್ತಿತರ ಅಲಂಕಾರಿಕ ವಸ್ತುಗಳನ್ನು ಬಳಸದಂತೆಯೂ ಜಾಗೃತಿ ಮೂಡಿಸಬೇಕು ಎಂದು ಅವರು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES