Thursday, December 19, 2024

ವಿಜಯನಗರ ದಂಪತಿಗೆ ಮೋದಿ ಜೊತೆ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗುವ ಸೌಭಾಗ್ಯ

ವಿಜಯನಗರ : ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಣವಿಕಲ್ಲು ಗ್ರಾಮ ಮೂಲದ ದಂಪತಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗಿಯಾಗಲು ಆಹ್ವಾನ ನೀಡಿದ್ದಾರೆ.

ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಜಿ.ಅಂಬಿಕಾ ಹಾಗೂ ಅವರ ಪತಿ ಜಿ.ಗಿರೀಶ ಅವರ ಸೇವೆಯನ್ನು ಆಧರಿಸಿ, ಆಗಸ್ಟ್ 15 ರಂದು ದೆಹಲಿಯಲ್ಲಿ ಜರುಗುವ ಸ್ವಾತಂತ್ರ್ಯೋತ್ಸವದಲ್ಲಿ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜೊತೆಯಲ್ಲಿ ಈ ದಂಪತಿಗೆ ಭಾಗಿಯಾಗುವ ಅವಕಾಶ ದೊರೆತಿದೆ.

ನವದೆಹಲಿಯ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಕಚೇರಿಯಿಂದ ಈ ದಂಪತಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಅಧಿಕೃತವಾಗಿ ಆಹ್ವಾನ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು, ಇಂತಹ ವಿಶಿಷ್ಟ ಅವಕಾಶವನ್ನು ದೇಶದ ಎಲ್ಲಾ ರಾಜ್ಯಗಳಿಂದ ನಿಗದಿತ ಸಂಖ್ಯೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆಗೈದವರನ್ನು ಗುರುತಿಸಿದ್ದಾರೆ. ಅವರನ್ನು ತಮ್ಮೊಂದಿಗೆ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗಿಸುವ ವಿಶಿಷ್ಟವಾದ ಪರಿಕಲ್ಪನೆಯನ್ನು ಅನುಷ್ಠಾನಕ್ಕೆ ತಂದಿದ್ದಾರೆ.

RELATED ARTICLES

Related Articles

TRENDING ARTICLES