Friday, November 22, 2024

ಡಿಕೆಶಿ ವಿರುದ್ದ ಕಮಿಷನ್​ ಆರೋಪ: ಯೂ ಟರ್ನ್​ ಹೊಡೆದ ಗುತ್ತಿಗೆದಾರರು

ಬೆಂಗಳೂರು: ಈ ಹಿಂದೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ವಿರುದ್ದ ಕಾಮಗಾರಿಗಳ ಬಿಲ್‌ ಪಾವತಿಗೆ ಕಮಿಷನ್‌ ಕೇಳುತ್ತಿದ್ದಾರೆ ಎಂದು ನೇರ ಆಪಾದನೆ ಮಾಡಿದ್ದ ಬಿಬಿಎಂಪಿ ಗುತ್ತಿಗೆದಾರ ಹೇಮಂತ್‌ ಯೂ ಟರ್ನ್ ಹೊಡೆದಿದ್ದಾರೆ

ಬಿಬಿಎಂಪಿ ವತಿಯಿಂದ ಬೆಂಗಳೂರಿನಲ್ಲಿ ನಡೆದಿರುವ ಹಳೇ ಕಾಮಗಾರಿಗಳ ಬಿಲ್‌ ಪಾವತಿ ಮಾಡಲು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು 15 ಪರ್ಸೆಂಟ್‌ ಕಮಿಷನ್‌ ಕೇಳಿದ್ದಾರೆ. ಅವರು ಕೇಳಿಲ್ಲವೆಂದಾದರೆ ಅವರೇ ನಂಬಿರುವ ತುಮಕೂರಿನ ನೊಣವಿನಕೆರೆಯ ಅಜ್ಜಯ್ಯನ ಸನ್ನಿಧಿಗೆ ಬಂದು ಪ್ರಮಾಣ ಮಾಡಲಿ ಎಂದು  ಬಿಬಿಎಂಪಿ ಗುತ್ತಿಗೆದಾರರು ಸವಾಲು ಹಾಕಿದ್ದರು.

ಇದನ್ನೂ ಓದಿ: 77 ನೇ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿದ ಸಿಎಂ

ಸೋಮವಾರ ಬಿಬಿಎಂಪಿ ಗುತ್ತಿಗೆದಾರರ ಸಂಘದ ವತಿಯಿಂದ ನಡೆದ ಸುದ್ದಿಗೋಷ್ಟಿಯಲ್ಲಿ ಸಂಘದ ಅಧ್ಯಕ್ಷ  ಮಂಜುನಾಥ್ ಮಾತನಾಡಿ, ನಮಗೆ ಯಾವುದೇ ರೀತಿಯ ಭಯ, ಒತ್ತಡ ಇಲ್ಲ. ನಮ್ಮ ಬಿಲ್ ಬರುವ ತನಕ ಹೋರಾಟ ಮುಂದುವರಿಸುತ್ತೇವೆ.

ಕಮಿಷನ್ ಆರೋಪ ಮಾಡಿರೋದು ಮಧ್ಯವರ್ತಿಗಳು, ನಾವೂ ಯಾವುದೇ ರೀತಿ ಆರೋಪ ಮಾಡಿಲ್ಲ. ಯಾರೋ ಮಧ್ಯವರ್ತಿಗಳು ಈ ಕೆಲಸ ಮಾಡಿದ್ದಾರೆ. ಉಪ ಮುಖ್ಯಮಂತ್ರಿಗಳನ್ನು ಭೇಟಿ ಮಾಡುತ್ತೇವೆ. ಅವರು ಏನು ಸಲಹೆ ಕೊಡುತ್ತಾರೋ ನೋಡಬೇಕು. ಡಿಸಿಎಂ ಅವರ ಭೇಟಿ ಬಳಿಕ ಡೆಡ್‌ಲೈನ್ ಕೊಡುತ್ತೇವೆ. ಡೆಡ್‌ಲೈನ್ ಮೀರಿದರೆ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಇನ್ನು ಕಮಿಷನ್‌ ವಿಚಾರವಾಗಿ ಡಿ.ಕೆ. ಶಿವಕುಮಾರ್‌ ಅವರು ನೊಣವಿನಕೆರೆ ಅಜ್ಜಯ್ಯನ ಮೇಲೆ ಪ್ರಮಾಣ ಮಾಡಲಿ ಎಂದು ಸವಾಲು ಹಾಕಿದ್ದ ಗುತ್ತಿಗೆದಾರ ಹೇಮಂತ್ ಮಾತನಾಡಿ, ನಾನು ಯಾವುದೇ ಪಕ್ಷದಲ್ಲಿ ಗುರುತಿಸಿಕೊಂಡಿಲ್ಲ. ಉಪ ಮುಖ್ಯಮಂತ್ರಿ ವಿರುದ್ಧ ನಾನು ಭಾವುಕನಾಗಿ ಹೇಳಿಕೆ ಕೊಟ್ಟೆ. ಅಜ್ಜಯ್ಯನ ಮೇಲೆ ಆಣೆ ಮಾಡಲಿ ಅನ್ನೋ ಹೇಳಿಕೆ ಹಿಂಪಡೆಯುತ್ತೇನೆ.

ಇದರೊಂದಿಗೆ ಕಮಿಷನ್‌ ವಿಚಾರವನ್ನೇ ಅಸ್ತ್ರವಾಗಿಸಿಕೊಂಡು ದೊಡ್ಡ ಮಟ್ಟದ ಹೋರಾಟಕ್ಕೆ ಅಣಿಯಾಗಿದ್ದ ಪ್ರತಿಪಕ್ಷ ಬಿಜೆಪಿಗೆ ನಿರುತ್ಸಾಹ ತಂದಿದೆ.

 

RELATED ARTICLES

Related Articles

TRENDING ARTICLES