ಬೆಂಗಳೂರು : ಶಕ್ತಿಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಸಾರಿಗೆ ಸೇವೆ ಸ್ಥಗಿತ ಎಂಬ ಸುದ್ದಿ ಎಲ್ಲೆಡೆ ಪ್ರಸಾರವಾಗುತ್ತಿರುವ ಹಿನ್ನೆಲೆ ಕೆಎಸ್ಆರ್ಟಿಸಿ ಸ್ಪಷ್ಟನೆ ನೀಡಿದೆ.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೇವೆಯು ಇನ್ನು ಕೆಲವೇ ದಿನಗಳಲ್ಲಿ ಕೊನೆಗೊಳ್ಳಲಿದೆ ಎನ್ನುವ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ ಕೆಎಸ್ಆರ್ಟಿಸಿ ಅಧಿಕೃತ ಟ್ವಿಟರ್ ಖಾತೆಯಲ್ಲಿ ಸ್ಪಷ್ಟನೆ ನೀಡಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಶಕ್ತಿ ಯೋಜನೆ ಕೊನೆಗೊಳ್ಳಲಿದ್ದು, ಮಹಿಳೆಯರಿಗೆ ಒದಗಿಸುತ್ತಿರುವ ಉಚಿತ ಪ್ರಯಾಣ ಶೀಘ್ರದಲ್ಲಿಯೆ ಸ್ಥಗಿತಗೊಳ್ಳಲಿದೆ ಎಂಬುದಾಗಿ ಸುದ್ದಿಯನ್ನು ಪ್ರಕಟಿಸುತ್ತಿರುವುದು ಸತ್ಯಕ್ಕೆ ದೂರವಾದ ವಿಷಯವಾಗಿತ್ತುದೆ. ಈ ರೀತಿಯ ಯಾವುದೇ ಗೊಂದಲದ ಸಂದೇಶಗಳನ್ನು ಸಾರ್ವಜನಿಕ ಪ್ರಯಾಣಿಕರು ನಂಬಬಾರದು. ಈ ಬಗ್ಗೆ ಸಾರ್ವಜನಿಕರಿಗೆ ಕಾಲಕಾಲಕ್ಕೆ ಸಮರ್ಪಕವಾದ ಮಾಹಿತಿಯನ್ನು ಒದಗಿಸುತ್ತೇವೆ.
ಮಹಿಳೆಯರಿಗೆ ಉಚಿತ ಪ್ರಯಾಣ ಶಕ್ತಿ ಯೋಜನೆಯು ಎಂದಿನಂತೆ ಮುಂದುವರೆಯಲಿದೆ ಎಂಬುದನ್ನು ಸ್ಪಷ್ಟಪಡಿಸಲಾಗಿದೆ . ಎಂಬ ಪ್ರಕಟಣೆಯನ್ನು ಟ್ವೀಟ್ ಮಾಡುವ ಮೂಲಕ ಸ್ಪಷ್ಟಪಡಿಸಿದೆ.
ಶಕ್ತಿ ಯೋಜನೆ ಕುರಿತು ಸ್ಪಷ್ಟೀಕರಣ: pic.twitter.com/dOkr6IWyoS
— KSRTC (@KSRTC_Journeys) August 16, 2023