Monday, December 23, 2024

ಆಟೋ ಮತ್ತು KSRTC ಬಸ್ ಮಧ್ಯೆ ಭೀಕರ ಅಪಘಾತ; ಆಟೋ ಚಾಲಕ ಸಾವು

ಹಾಸನ : ಆಟೋ ಮತ್ತು KSRTC ಬಸ್ ನಡುವೆ ಭೀಕರ ಅಪಘಾತ ನಡೆದಿದ್ದು, ಆಟೋ ಚಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೆಐಎಡಿಬಿ ಏರಿಯಾದ ಮೈಸೂರು ರಸ್ತೆಯಲ್ಲಿ ನಡೆದಿದೆ.

ಬಸ್ ಚಾಲಕನ ಅಜಾಗರೂಕತೆಯಿಂದ ನಿಂತಿದ್ದ ಆಟೋಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿರುವ KSRTC ಬಸ್. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಆಟೋದಲ್ಲಿ ಇದ್ದ 52 ವರ್ಷದ ಆಟೋ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಅಷ್ಟೇ ಅಲ್ಲದೆ ಇನ್ನೂ ಇಬ್ಬರು ಆಟೋದಲ್ಲಿ ಪ್ರಯಾಣ ಮಾಡುತ್ತಿದ್ದು, ಇಬ್ಬರು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ.

ಇದನ್ನು ಓದಿ : 10 ರಿಂದ 15 ಹಾಲಿ, ಮಾಜಿ ಶಾಸಕರು ಕಾಂಗ್ರೆಸ್​ಗೆ ಸೇರ್ಪಡೆ: ಸಚಿವ ಚಲುವರಾಯಸ್ವಾಮಿ!

ಭಯಾನಕ ರೀತಿಯಲ್ಲಿ ಡಿಕ್ಕಿ ಹೊಡೆದಿರುವ ಹಿನ್ನೆಲೆ ಆಟೋ ಸಂಪೂರ್ಣ ನುಜ್ಜು ಗುಜ್ಜಾಗಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ಪಲ್ಟಿ ಹೊಡೆದು ಬಿದ್ದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

RELATED ARTICLES

Related Articles

TRENDING ARTICLES