ಬೆಂಗಳೂರು : ಐರ್ಲೆಂಡ್ ವಿರುದ್ಧದ ಎರಡನೇ ಟಿ-20 ಪಂದ್ಯದಲ್ಲಿ ಟೀಂ ಇಂಡಿಯಾ ಬೃಹತ್ ಟಾರ್ಗೆಟ್ ಕಲೆಹಾಕಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 185 ರನ್ ಗಳಿಸಿತು.
ಟೀಂ ಇಂಡಿಯಾ ಪರ ಬೊಂಬಾಟ್ ಆಟ ಪ್ರದರ್ಶಿಸಿದ ಆರಂಭಿಕ ಬ್ಯಾಟರ್ ಋತುರಾಜ್ ಗಾಯಕ್ವಾಡ್ ಅರ್ಧಶತಕ(58) ಬಾರಿಸಿದರು. ಸಂಜು ಸ್ಯಾಮ್ಸನ್ 40 ರನ್ ಗಳಿಸಿದರೆ, ಯಶಸ್ವಿ ಜೈಸ್ವಾಲ್ 18, ರಿಂಕು ಸಿಂಗ್ 38 ಹಾಗೂ ಶಿವಂ ದುಬೆ 22 ರನ್ ಗಳಿಸಿದರು. ಐರ್ಲೆಂಡ್ ಪರ ಬ್ಯಾರಿ ಮೆಕಾರ್ಥಿ 2, ಕ್ರೇಗ್ ಯಂಗ್ ಮತ್ತು ವೈಟ್ ತಲಾ ಒಂದು ವಿಕೆಟ್ ಪಡೆದರು.
Innings Break!
After being put to bat, #TeamIndia post a total of 185/5.
Ruturaj Gaikwad top scored with 58 runs.
Scorecard – https://t.co/I2nw1YQmfx…… #IREvIND pic.twitter.com/QRMPtkKIWs
— BCCI (@BCCI) August 20, 2023
ಇನ್ನಿಂಗ್ಸ್ ಆರಂಭಿಸಿದ ಭಾರತ ಜೈಸ್ವಾಲ್ ಹಾಗೂ ತಿಲಕ್ ವರ್ಮಾ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಈ ವೇಳೆ ಋತುರಾಜ್ ಜೊತೆ ಸೇರಿಕೊಂಡ ಸ್ಯಾಮ್ಸನ್ ಜವಾಬ್ದಾರಿಯುತ ಆಟವಾಡಿದರು. 26 ಎಸೆತಗಳಲ್ಲಿ 5 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 40 ರನ್ ಗಳಿಸಿದರು. ನಂತರ ಕ್ರೀಸ್ಗೆ ಬಂದ ರಿಂಕು ಸಿಂಗ್ 21 ಎಸೆತಗಳಲ್ಲಿ 3 ಸಿಕ್ಸರ್ ಹಾಗೂ 2 ಬೌಂಡರಿಗಳೊಂದಿಗೆ 38 ರನ್ ಸಿಡಿಸಿದರು. ಶಿವಂ ದುಬೆ 16 ಎಸೆತಗಳಲ್ಲಿ 2 ಸಿಕ್ಸರ್ ನೆರವಿನಿಂದ 22 ರನ್ ಗಳಿಸಿ ತಂಡದ ಮೊತ್ತ 180ರ ಗಡಿದಾಟಿಸಿದರು.