ಬೆಂಗಳೂರು : ಖಜಾಕಿಸ್ತಾನದ ರಾಯಭಾರಿ ನುರ್ಲನ್ ಜಲ್ಗಾಸ್ಭಯೇವ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ಏರೋಸ್ಪೇಸ್ ಟೆಕ್ನಾಲಜಿಯಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ರಾಜ್ಯದಲ್ಲಿ ಹೂಡಿಕೆಗೆ ಆಸಕ್ತಿ ಹೊಂದಿರುವುದಾಗಿ ತಿಳಿಸಿದರು.
ಇದನ್ನೂ ಓದಿ: ನಾಳೆ ನಗರದಲ್ಲಿ ಮೋದಿ ರೋಡ್ ಶೋ ರದ್ದು!
ಡಿಸೆಂಬರ್ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಖಜಾಕಿಸ್ತಾನದ ಐಟಿ ಟೆಕ್ ಸಮ್ಮಿಟ್ ನಲ್ಲಿ ಸಚಿವರು ಭಾಗವಹಿಸುತ್ತಿದ್ದಾರೆ. ಈ ವೇಳೆ ಕಾನ್ಸುಲ್ ಜನರಲ್ ಕಚೇರಿಯನ್ನು ತೆರೆಯಲು ಪ್ರಸ್ತಾ ವನೆ ಸಲ್ಲಿಸಲಾಗಿದೆ ಎಂದು ರಾಯಭಾರಿಗಳು ತಿಳಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯದಲ್ಲಿ ಹೂಡಿಕೆಗೆ ಎಲ್ಲಾ ಸಹಕಾರವನ್ನು ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.