Friday, October 18, 2024

ಆಗಸ್ಟ್​​ 23 ಇನ್ಮುಂದೆ ‘ರಾಷ್ಟ್ರೀಯ ಬಾಹ್ಯಾಕಾಶ ದಿನ’: ಮೋದಿ ಘೋಷಣೆ!

ಬೆಂಗಳೂರು : ಆಗಸ್ಟ್​ 23 ನ್ನು ಇನ್ನು ಮುಂದೆ ರಾಷ್ಟ್ರೀಯ ಬಾಹ್ಯಾಕಾಶ ದಿನವೆಂದು ಆಚರಣೆ ಮಾಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಬೆಂಗಳೂರಿನ ಪೀಣ್ಯ ಬಳಿ ಇರುವ ಇಸ್ರೋ ನಿಯಂತ್ರಣ ಕೇಂದ್ರದಲ್ಲಿ ವಿಜ್ಞಾನಿಗಳ ಜೊತೆ ಸಂವಾದ ನಡೆಸಯವ  ವೇಳೆ ಈ ವಿಚಾರ ಪ್ರಸ್ತಾಪ ಮಾಡಿದ ಪ್ರಧಾನಿ ಮೋದಿ, ಇಸ್ರೋ ವಿಜ್ಞಾನಿಗಳು ವಿಕ್ರಮ್ ಲ್ಯಾಂಡರ್​ನ ಸಾಫ್ಟ್​ ಲ್ಯಾಂಡ್​ ಮಾಡಿ ಯಶಸ್ವಿಯಾದ ಹಿನ್ನೆಲೆ ಇನ್ನು ಮುಂದೆ ಪ್ರತಿ ವರ್ಷ ಆಗಸ್ಟ್​ 23 ರನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವಾಗಿ ಆಚರಿಸಲಾಗುವುದು ಎಂದು ಅವರು ಘೋಷಣೆ ಮಾಡಿದರು.

ಚಂದ್ರಯಾನ-3  ಚಂದ್ರನ ದಕ್ಷಿಣ ಮೇಲ್ಮೈನಲ್ಲಿ ವಿಕ್ರಮ್​ ಲ್ಯಾಂಡರ್​ನ ಯಶ್ವಸಿಯಾಗಿ ಲ್ಯಾಂಡ್​ ಮಾಡುವ ಮೂಲಕ  ಇತಿಹಾಸ ಸೃಷ್ಟಿಸಿ ಜಗತ್ತೆ ಭಾರತದತ್ತ ತಿರುಗಿನೋಡುವಂತಾಗಿದೆ. ಈ ಯಶಸ್ಸನ್ನು ಅಮರವಾಗಿಸಲು ಆ.23 ನ್ನು ಇನ್ಮುಂದೆ ರಾಷ್ಟ್ರೀಯ ಬಾಹ್ಯಾಕಾಶ ದಿನವಾಗಿ ಆಚರಣೆ ಮಾಡಲಾಗುವುದು ಎಂದರು.

RELATED ARTICLES

Related Articles

TRENDING ARTICLES