Friday, November 22, 2024

ಆ.30 ರಂದು “ಗೃಹಲಕ್ಷ್ಮಿ”ಯೋಜನೆ ಚಾಲನಾ ಕಾರ್ಯಕ್ರಮಕ್ಕೆ ಆಹ್ವಾನ: ಜಿಲ್ಲಾಧಿಕಾರಿ ಡಾ.ಶಿವಶಂಕರ

ಬೆಂಗಳೂರು ಗ್ರಾಮಾಂತರ ಜಿಲ್ಲೆ: ರಾಜ್ಯದಲ್ಲಿರುವ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ, ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು  ರೂ.2000 ರೂಪಾಯಿಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ.

ಈಗಾಗಲೇ ಯೋಜನೆಯಡಿ ನೊಂದಣಿಯಾಗಿರುವ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮಾಡುವ ನಿಟ್ಟಿನಲ್ಲಿ 2023  ರ ಆಗಸ್ಟ್ 30 ಬುಧವಾರ ರಂದು  ಬೆಳಿಗ್ಗೆ 11:30 ಕ್ಕೆ  ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಮುಖ್ಯಮಂತ್ರಿ, ಉಪ ಮುಖ್ಯ ಮಂತ್ರಿ ಹಾಗೂ ಸಚಿವರುಗಳು ಲೋಕಾರ್ಪಣೆಗೊಳಿಸಲಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ 101 ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ, ನಗರ ವ್ಯಾಪ್ತಿಯ 42 ಸ್ಥಳಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ನೋಡೆಲ್ ಅಧಿಕಾರಿಗಳನ್ನು ನೇಮಿಸಲಾಗಿದೆ.

ಕಾರ್ಯಕ್ರಮ ವೀಕ್ಷಣೆ ಮಾಡಲು ಟಿ.ವಿ/ಎಲ್.ಇ.ಡಿ ಪರದೆ ವ್ಯವಸ್ಥೆಗೊಳಿಸಲಾಗುತ್ತದೆ. ಫಲಾನುಭವಿಗಳು, ಚುನಾಯಿತ ಜನ ಪ್ರತಿನಿಧಿಗಳು, ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಆಯಾ ಕ್ಷೇತ್ರ ವ್ಯಾಪ್ತಿಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮಾಡುವ ಸಂದೇಶ ಬರುವುದರಿಂದ ನೊಂದಾಯಿತ ಫಲಾನುಭವಿಗಳು ಬ್ಯಾಂಕ್ ಖಾತೆಯೊಂದಿಗೆ ಜೋಡಣೆ ಮಾಡಿಕೊಂಡಿರುವ ಮೊಬೈಲ್ ಫೋನ್‌ಗಳೊಂದಿಗೆ ಕಾರ್ಯಕ್ರಮಕ್ಕೆ ಹಾಜರಾಗುವುದು.

RELATED ARTICLES

Related Articles

TRENDING ARTICLES