Sunday, November 3, 2024

ಬಂಪರ್ ಗಿಫ್ಟ್ : ಸಿಲಿಂಡರ್ ಬೆಲೆ 200 ರೂ. ಇಳಿಕೆ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ದೇಶಾದ್ಯಂತ ಗೃಹಿಣಿಯರಿಗೆ ಭರ್ಜರಿ ಗಿಫ್ಟ್ ನೀಡಲು ಸಿದ್ಧವಾಗಿದೆ.

ಕೇಂದ್ರ ಸರ್ಕಾರ ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ 200 ರೂಪಾಯಿ ಕಡಿಮೆ ಮಾಡಲಿದೆ. LPG ಸಿಲಿಂಡರ್‌ಗೆ 200 ರೂ. ಸಬ್ಸಿಡಿ ಘೋಷಿಸಿದೆ. ಕೇಂದ್ರ ಕ್ಯಾಬಿನೆಟ್‌ನಲ್ಲಿ ಇದಕ್ಕೆ ಒಪ್ಪಿಗೆ ಸೂಚಿಸಲಾಗಿದೆ.

ಸಿಲಿಂಡರ್ ಸಬ್ಸಿಡಿಯಿಂದ ಕೇಂದ್ರ ಸರ್ಕಾರಕ್ಕೆ 7,500 ಕೋಟಿ ರೂಪಾಯಿ ಹೊರೆಯಾಗಲಿದೆ. ಪಿಎಂ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಮಾತ್ರ ಈ ಸಬ್ಸಿಡಿ ಅನ್ವಯವಾಗಲಿದೆ. ಸದ್ಯ 14 ಕಿಲೋ ಎಲ್​ಪಿಜಿ ಸಿಲಿಂಡರ್ ಬೆಲೆ 1,100 ರೂ ಇದೆ. ಇದರ ಬೆಲೆ ಸಾವಿರ ರೂ ಒಳಗೆ ಇರಲಿದೆ.

ಈ ಸಬ್ಸಿಡಿ ಹಣ ಸರ್ಕಾರಿ ಸ್ವಾಮ್ಯದ ಇಂಡಿಯನ್‌ ಆಯಿಲ್‌, ಹಿಂದೂಸ್ತಾನ ಪೆಟ್ರೋಲಿಯಂ ಕಾರ್ಪೋರೇಷನ್‌ ಮತ್ತು ಭಾರತ್‌ ಪೆಟ್ರೋಲಿಯಂ ಕಾರ್ಪೋರೇಷನ್‌ ಕಂಪನಿಗಳಿಗೆ ಸಿಗಲಿದೆ. ನೇರವಾಗಿ ಗ್ರಾಹಕರ ಖಾತೆಗೆ ವರ್ಗಾವಣೆಯಾಗುವುದಿಲ್ಲ. ತೈಲ ಕಂಪನಿಗಳಿಗೆ ನೇರವಾಗಿ ಪಾವತಿಯಾಗುವ ಕಾರಣ ಖರೀದಿಸುವಾಗಲೇ 200 ರೂ. ಕಡಿತಗೊಳ್ಳಲಿದೆ.

RELATED ARTICLES

Related Articles

TRENDING ARTICLES