ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೆಹಲಿಯಿಂದ ಕರ್ನಾಟಕಕ್ಕೆ ಪ್ರಯಾಣ ಬೆಳೆಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳ ಪೈಕಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಗೆ ಮೈಸೂರಿನಲ್ಲಿ ಇಂದು ಅದ್ದೂರಿ ಚಾಲನೆ ಸಿಗಲಿದೆ.
ಈ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ಈ ಇಬ್ಬರೂ ನಾಯಕರು 4ನೇ ಗ್ಯಾರಂಟಿಗೆ ಚಾಲನೆ ನೀಡಲಿದ್ದಾರೆ.
12 ಗಂಟೆಗೆ ವೇದಿಕೆ ಕಾರ್ಯಕ್ರಮ
ಬೆಳಗ್ಗೆ 8 ಗಂಟೆಗೆ ದೆಹಲಿಯಿಂದ ಹೊರಟಿರುವ ರಾಹುಲ್ ಗಾಂಧಿ ಕೆಲವೇ ಕ್ಷಣಗಳಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಂತರ ರಾಹುಲ್ ಗಾಂಧಿ KIALಯಿಂದ ವಿಶೇಷ ವಿಮಾನದ ಮೂಲಕ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದು, 11.40 ಕ್ಕೆ ಮೈಸೂರು ವಿಮಾನ ನಿಲ್ದಾಣ ತಲುಪಲಿದ್ದಾರೆ. ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ಮಹಾರಾಜ ಕಾಲೇಜ್ ಗ್ರೌಂಡ್ ತಲುಪಲಿರುವ ರಾಹುಲ್ ಗಾಂಧಿ 12 ಗಂಟೆಗೆ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
#WATCH | Congress MP Rahul Gandhi leaves for Karnataka, from Delhi.
Party's general secretary KC Venugopal tweets, "The Congress-led Karnataka Government will be launching the world’s largest ever welfare scheme for women – the Gruha Lakshmi Yojana, in the presence of INC… pic.twitter.com/xlICpotyk0
— ANI (@ANI) August 30, 2023