Monday, November 25, 2024

ಸೌಜನ್ಯ ಪ್ರಕರಣ: ವೀರೇಂದ್ರ ಹೆಗ್ಗಡೆ ವಿರುದ್ಧ ಹೇಳಿಕೆಗೆ ತಡೆ ಆದೇಶ ಪಾಲಿಸಿ: ಹೈಕೋರ್ಟ್​

ಬೆಂಗಳೂರು : ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಅವಹೇಳನಕಾರಿ ಮತ್ತು ನಿಂಧನಾತ್ಮಕ ಹೇಳಿಕೆಗಳನ್ನು ನೀಡದಂತೆ ನ್ಯಾಯಾಲಯದ ಆದೇಶ ಉಲ್ಲಂಘನೆಯಾಗದಂತೆ ನೋಡಿಕೊಳ್ಳಲು ರಾಜ್ಯ ಸರ್ಕಾರ ಮತ್ತು ಗೃಹ ಇಲಾಖೆಗೆ ಹೈಕೋರ್ಟ್​ ಸೂಚನೆ ನೀಡಿದೆ.

ಸೌಜನ್ಯ ಪ್ರಕರಣವನ್ನು ಪ್ರಧಾನವಾಗಿ ಮುಂದಿಟ್ಟುಕೊಂಡು ಧರ್ಮಸ್ಥಳದ ಧರ್ಮಾಧಿಕಾರಿ ಟಿ. ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬ ಸದಸ್ಯರು, ನ್ಯಾಯಾಂಗ ಮತ್ತು ಪೊಲೀಸರ ವಿರುದ್ಧ ಅವಹೇಳನಕಾರಿ ಮತ್ತು ನಿಂದನಾತ್ಮಕ ಹೇಳಿಕೆ ನೀಡದಂತೆ ಮಹೇಶ್ ಶೆಟ್ಟಿತಿಮ್ಮರೊಡಿ ಅವರಿಗೆ ಅಧೀನ ನ್ಯಾಯಾಲಯ ನೀಡಿರುವ ಪ್ರತಿಬಂಧಕಾದೇಶ ಉಲ್ಲಂಘನೆಯಾಗದಂತೆ ನೋಡಿಕೊಳ್ಳುವಂತೆ ರಾಜ್ಯ ಸರ್ಕಾರ ಹಾಗೂ ಗೃಹ ಇಲಾಖೆಗೆ ಹೈಕೋರ್ಟ್‌ ಸೂಚಿಸಿದೆ.

ಇದನ್ನೂ ಓದಿ: ಬೆಂಗಳೂರು ಸೇರಿದಂತೆ ಹಲವೆಡೆ ಗುಡುಗು ಸಹಿತ ಮಳೆ!

ಅಧೀನ ನ್ಯಾಯಾಲಯದ ಆದೇಶ ಉಲ್ಲಂಘಿಸುತ್ತಿರುವ ಉಜಿರೆಯ ಮಹೇಶ್ ತಿಮ್ಮರೊಡಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಹೈಕೋರ್ಟ್‌ಗೆ ತಕ ರಾರು ಅರ್ಜಿ ಸಲ್ಲಿಸಲಾಗಿದೆ.

ಅರ್ಜಿ ಸಂಬಂಧ ಕೆಲ ಕಾಲ ವಾದ ಆಲಿ ಸಿದ ನ್ಯಾ|ಕೃಷ್ಣ ಎಸ್‌. ದೀಕ್ಷಿತ್ ಅವರ ಪೀಠ, ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾವ್ಯದರ್ಶಿ, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾವ್ಯದರ್ಶಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ಬೆಂಗಳೂರು ನಗರ ಪೊಲೀಸ್ ಆಯುಕ್ತರು, ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ, ಬಂಟ್ವಾಳ ಡಿವೈಎಸ್ಪಿ, ಬೆಳ್ತಂಗಡಿ ಹಾಗೂ ಧರ್ಮಸ್ಥಳ ಪೊಲೀಸ್ ಠಾಣಾಧಿಕಾರಿಗಳು, ಮಹೇಶ್ ಶೆಟ್ಟಿ ತಿಮ್ಮರೊಡಿ ಅವರಿಗೆ ನೋಟಿಸ್ ಜಾರಿಗೊಳಿಸಿತು.

RELATED ARTICLES

Related Articles

TRENDING ARTICLES