ಬೆಂಗಳೂರು : ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ಗೆ ಸಿಎಂ ಸಿದ್ದರಾಮಯ್ಯ ನಾಳೆ ಶಿಫ್ಟ್ ಆಗಲಿದ್ದಾರೆ.
ಮಾಜಿ ಮುಖ್ಯಮಂತ್ರಿ ಡಾ.ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿದ್ದಾಗ ವಾಸವಿದ್ದ ಕಾವೇರಿ ನಿವಾಸದಲ್ಲಿ ದುರಸ್ತಿ ಕಾರ್ಯ ಕೈಗೊಳ್ಳಲಾಗಿತ್ತು. ದುರಸ್ತಿ ಕಾರ್ಯ ಪೂರ್ಣಗೊಂಡಿರುವ ಹಿನ್ನೆಲೆ, ಸಿದ್ದರಾಮಯ್ಯ ಕಾವೇರಿ ನಿವಾಸಕ್ಕೆ ನಾಳೆ ಗೃಹಪ್ರವೇಶ ಮಾಡಲಿದ್ದಾರೆ.
ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯರಿಂದ ಪೂಜೆ ಸಲ್ಲಿಸಲಾಗುವುದು. ಕಳೆದ 2013ರಲ್ಲಿ ಸಿಎಂ ಆಗಿದ್ದ ಅವಧಿಯಲ್ಲಿ ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ಉಳಿದುಕೊಂಡಿದ್ರು. ಬಳಿಕ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲೂ ಕಾವೇರಿ ನಿವಾಸದಲ್ಲೇ ಉಳಿದುಕೊಂಡಿದ್ರು.
ಜಾರ್ಜ್ ಹೆಸರಿನಲ್ಲಿ ಹಂಚಿಕೆ
ಅಂದು ಕೆ.ಜೆ.ಜಾರ್ಜ್ ಹೆಸರಿನಲ್ಲಿ ಹಂಚಿಕೆಯಾಗಿದ್ದ ಕಾವೇರಿ ನಿವಾಸದಲ್ಲಿ ಸ್ವತಃ ಸಿದ್ದರಾಮಯ್ಯ ಉಳಿದುಕೊಂಡಿದ್ರು. ಬದಲಾದ ಸನ್ನಿವೇಶದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ವಾಸ್ತವ್ಯ ಬದಲಿಸಿದ್ರು. ಕಾವೇರಿಯಿಂದ ಶಿವಾನಂದ ವೃತ್ತದ ಸರ್ಕಾರಿ ನಿವಾಸಕ್ಕೆ ಶಿಫ್ಟ್ ಆಗಿದ್ದರು. ಇದೀಗ ಸಿಎಂ ಆದ ಬಳಿಕ ಮತ್ತೆ ಕಾವೇರಿ ನಿವಾಸಕ್ಕೆ ಶಿಫ್ಟ್ ಆಗ್ತಿದ್ದಾರೆ.