ನವದೆಹಲಿ : ಎರಡು ಬಾರಿ ದೇಶದ ಪ್ರಧಾನ ಮಂತ್ರಿ ಆದಾಗಿನಿಂದ ಈವರೆಗೆ ನರೇಂದ್ರ ಮೋದಿ ಅವರು ಒಂದೇ ಒಂದು ರಜೆ ತೆಗೆದುಕೊಂಡಿಲ್ಲ ಎಂದು ಪ್ರಧಾನ ಮಂತ್ರಿಗಳ ಸಚಿವಾಲಯ ತಿಳಿಸಿದೆ.
ಪುಣೆ ಮೂಲದ ಆರ್‌ಟಿಐ ಕಾರ್ಯಕರ್ತನೊಬ್ಬ ಆರ್‌ಟಿಐ ಮೂಲಕ ಮಾಹಿತಿ ಪಡೆದುಕೊಂಡಿದ್ದು, ಅದರಲ್ಲಿ ಈ ಅಚ್ಚರಿ ಮಾಹಿತಿ ಬಹಿರಂಗವಾಗಿದೆ.
ನರೇಂದ್ರ ಮೋದಿ ಅವರು 2014ರಲ್ಲಿ ಅಧಿಕಾರ ವಹಿಸಿಕೊಂಡರು. ಬಳಿಕ, ಯಾವುದೇ ರಜೆ ತೆಗೆದುಕೊಂಡಿಲ್ಲ. 9 ವರ್ಷಗಳಿಂದ ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ಅಷ್ಟೇ ಅಲ್ಲ, ಕಳೆದ 9 ವರ್ಷಗಳಲ್ಲಿ ಮೋದಿ ಅವರು ದೇಶ ಹಾಗೂ ವಿದೇಶಗಳಲ್ಲಿ 3 ಸಾವಿರಕ್ಕೂ ಹೆಚ್ಚು ಸಮಾರಂಭಗಳಲ್ಲಿ ಭಾಗವಹಿಸಿದ್ದಾರೆ ಎಂದು ಪಿಎಂಒ ಹೇಳಿದೆ.
20 ವರ್ಷದಲ್ಲಿ ರಜೆಯೇ ಇಲ್ಲ
ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿ ಮತ್ತು ಭಾರತದ ಪ್ರಧಾನ ಮಂತ್ರಿಯಾಗಿ 20 ವರ್ಷಗಳನ್ನು ಪೂರ್ಣಗೊಳಿಸಿದ್ದಾರೆ. ಈ 20 ವರ್ಷಗಳಿಂದ ಮೋದಿ ಅವರು ಒಂದೇ ಒಂದು ರಜೆಯನ್ನು ತೆಗೆದುಕೊಂಡಿಲ್ಲ. 24 ಗಂಟೆಗಳ ಕಾಲ ದೇಶಕ್ಕಾಗಿ ದುಡಿಯುತ್ತಿದ್ದಾರೆ ಎಂದು ಸ್ವತಃ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಹೇಳಿದ್ದರು.
ಮಾಹಿತಿ ಪಡೆದಿದ್ದು ಯಾರು?
ಪುಣೆ ಮೂಲದ ಆರ್‌ಟಿಐ ಕಾರ್ಯಕರ್ತ ಪ್ರಫುಲ್ಲ ಶಾರದಾ ಈ ಮಾಹಿತಿ ಪಡೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು 2014ರಲ್ಲಿ ಅಧಿಕಾರ ವಹಿಸಿಕೊಂಡ ನಂತರ ಎಷ್ಟು ದಿನಗಳಲ್ಲಿ ಕಚೇರಿಯಲ್ಲಿ ತಮ್ಮ ಹಾಜರಾತಿಯನ್ನು ನೋಂದಾಯಿಸಿದ್ದಾರೆ ಎಂದು ಆರ್‌ಟಿಐ ಮೂಲಕ ಪ್ರಧಾನಿ ಕಚೇರಿಯಿಂದ ಮಾಹಿತಿ ಕೇಳಿದ್ದರು.
ಸದ್ಯ, ಈ ಆರ್‌ಟಿಐ ಕಾಪಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹಲವು ರಾಜಕಾರಣಿಗಳು ಇದನ್ನು ಟ್ವೀಟ್ ಮಾಡಿ ‘ನಮ್ಮ ಪ್ರಧಾನಿ, ನಮ್ಮ ಹೆಮ್ಮೆ’ ಎಂದು ಬರೆದುಕೊಂಡಿದ್ದಾರೆ.
No leave has been taken (availed) by PM @narendramodi after taking over office since 2014 and in 9 years he has attended more than 3000 events-functions. Reply to RTI Query pic.twitter.com/tjfEV37qTs
— Vikas Bhadauria (@vikasbha) September 4, 2023