ಅಯೋಧ್ಯೆ : ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪುತ್ರ ಯುವನಿಧಿ ಸ್ಟಾಲಿನ್ ಸನಾತನಧರ್ಮ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬೆನ್ನಲ್ಲೇ ಹಲವು ಹಿಂದು ಸ್ವಾಮಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಯೋಧ್ಯೆಯ ಸ್ವಾಮಿಜಿಯೊಬ್ಬರು ಉದಯ್ನಿಧಿ ಸ್ಟಾಲಿನ್ಗೆ ಜೀವ ಬೆದರಿಕೆ ಹಾಕಿದ್ದಾರೆ.
ಅಯೋಧ್ಯೆಯ ತಪಸ್ವಿ ಛವನಿ ದೇವಸ್ಥಾನದ ಮುಖ್ಯ ಅರ್ಚಕರಾಗಿರುವ ಪರಮಹಂಸ ಆಚಾರ್ಯ ಸ್ವಾಮೀಜಿ ಅವರೇ ಉದಯನಿಧಿಗೆ ಜೀವ ಬೆದರಿಕೆ ಹಾಕಿದ್ದಾರೆ.
ಇದನ್ನೂ ಓದಿ: ಸನಾತನಧರ್ಮ ಕುರಿತು ವಿವಾದಾತ್ಮಕ ಹೇಳಿಕೆ: ಉದಯನಿಧಿ ವಿರುದ್ಧ ಕೋರ್ಟ್ಗೆ ದೂರು !
ಉದಯನಿಧಿ ಸ್ಟಾಲಿನ್ ಹೇಳಿಕೆ ಹಿಂದೂ ಧರ್ಮಕ್ಕೆ ಸಂಪೂರ್ಣ ವಿರುದ್ಧವಾಗಿದೆ. ಅವರ ತಲೆ ಕೆಡಿದು ತಂದು ಕೊಟ್ಟವರಿಗೆ 10 ಕೋಟಿ ಕೊಡುತ್ತೇನೆ. ಇಲ್ಲದಿದ್ದರೆ, ನಾನೇ ಅವನನ್ನು ಹುಡುಕಿ ಕೊಲ್ಲುತ್ತೇನೆ ಎಂದು ಪರಮಹಂಸ ಆಚಾರ್ಯ ಸ್ವಾಮೀಜಿ ಹೇಳಿದ್ದಾರೆ.
ಈ ಸ್ವಾಮೀಜಿ ಈ ಹಿಂದೆಯೂ ಕೂಡ ವಿವಾದಿತ ಹೇಳಿಕೆ ನೀಡಿದ್ದರು. ಪಠಾಣ್ ಚಿತ್ರಕ್ಕೆ ಸಂಬಂಧಿಸಿದಂತೆ ನಟ ಶಾರುಕ್ ಖಾನ್ ಅವರನ್ನು ಜೀವಂತ ಸುಡುತ್ತೇನೆ ಎಂದು ಹೇಳಿದ್ದರು.