Monday, December 23, 2024

‘ಭಾರತ್ ಕ್ರಿಕೆಟ್ ಟೀಂ’ ಅಂತ ಕರೆಯಬೇಕು : ಗವಾಸ್ಕರ್

ಬೆಂಗಳೂರು : I.N.D.I.A ಬದಲು ದೇಶದ ಹೆಸರನ್ನು ‘ರಿಪಬ್ಲಿಕ್ ಆಫ್ ಭಾರತ್’ ಎಂದು ಬದಲಾಯಿಸಲು ಕೇಂದ್ರ ಸರ್ಕಾರ ಚಿಂತನೆಗೆ ಟೀಂ ಇಂಡಿಯಾ ಮಾಜಿ ನಾಯಕ ಸುನಿಲ್ ಗವಾಸ್ಕರ್ ಬೆಂಬಲ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಗವಾಸ್ಕರ್, ನಮ್ಮ ದೇಶದ ನಿಜವಾದ ಹೆಸರು ಭಾರತ್. ಕೇಳಲು ಎಷ್ಟು ಚೆನ್ನಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಅಧಿಕೃತ ನಿರ್ಧಾರ ತೆಗೆದುಕೊಳ್ಳಬೇಕು ಎಂದಿದ್ದಾರೆ.

ಬಿಸಿಸಿಐ ಮಟ್ಟದಲ್ಲಿ ನಮ್ಮ ತಂಡವನ್ನು ಭಾರತ್ ಕ್ರಿಕೆಟ್ ಟೀಂ ಎಂದು ಕರೆಯಬೇಕು. ಇಲ್ಲಿಯವರೆಗೆ, ಅನೇಕ ದೇಶಗಳ ಹೆಸರುಗಳನ್ನು ಬದಲಾಯಿಸಲಾಗಿದೆ. ಇದು ಎಲ್ಲ ಹಂತಗಳಲ್ಲೂ ಬದಲಾಗಬೇಕಿದೆ ಎಂದು ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

ಜೆರ್ಸಿ ಬದಲಿಸುವಂತೆ ಒತ್ತಾಯ

ಟೀಂ ಇಂಡಿಯಾದ ಜೆರ್ಸಿಯಲ್ಲಿ ಹೆಸರು ಬದಲಾವಣೆ ಮಾಡಿ. ಟೀಂ ಇಂಡಿಯಾ ಬದಲಿಗೆ ಟೀಂ ಭಾರತ್ ಅಂತ ಜೆರ್ಸಿ ಬದಲಿಸುವಂತೆ ಬಿಸಿಸಿಐಗೆ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಒತ್ತಾಯಿಸಿದ್ದಾರೆ.

ಅಲ್ಲದೆ ಈ ವಿಶ್ವಕಪ್‍ನಲ್ಲಿ ನಾವು ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಬುಮ್ರಾ, ರವೀಂದ್ರ ಜಡೇಜಾ ಅವರನ್ನು ಹುರಿದುಂಬಿಸುತ್ತೇವೆ. ನಮ್ಮ ಹೃದಯದಲ್ಲಿ ಭಾರತೀಯರು ಎಂಬುದೇ ಇರಲಿ ಮತ್ತು ಆಟಗಾರರು ‘ಭಾರತ್’ ಇರುವ ಜೆರ್ಸಿಯನ್ನು ಧರಿಸುತ್ತಾರೆ ಎಂದು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES