ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಡೆಂಘಿ ಆತಂಕ ಹೆಚ್ಚಾಗಿದ್ದು, ಈವರೆಗೆ ಬೆಂಗಳೂರಲ್ಲಿ ಡೆಂಘಿ ಜ್ವರಕ್ಕೆ ಮೂವರು ಬಲಿಯಾಗಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.
ಸೆಪ್ಟೆಂಬರ್‌ನಲ್ಲಿ ಕೇವಲ 3 ದಿನಕ್ಕೆ 181 ಪ್ರಕರಣ ದಾಖಲಾಗಿದ್ದು, ಹವಾಮಾನ ವೈಪರೀತ್ಯದಿಂದ ಡೆಂಘಿ ರೋಗಿಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆಕಂಡಿದೆ. ಸದ್ಯ ಡೆಂಘಿ ಜ್ವರಕ್ಕೆ ಡೆಂಘೀಗೆ ಕಡಿವಾಣ ಹಾಕಲು ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಹೊಸ ಹೆಲ್ತ್ ಆ್ಯಪ್ ಬಿಡುಗಡೆ ಮಾಡಲು ನಿರ್ಧಾರ ಮಾಡಿದೆ ಎಂದು ತಿಳಿಸಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣಗಳ ಮೇಲ್ವಿಚಾರಣೆಗಾಗಿ ಡೆಂಗ್ಯೂ ಮೇಲ್ವಿಚಾರಣ ತಂತ್ರಾಂಶ ವನ್ನು ಅನಾವರಣಗೊಳಿಸಲಾಗುವುದು. ನಗರದಲ್ಲಿ ಕಳೆದ 2 ತಿಂಗಳಿಂದ ಹೆಚ್ಚು ಡೆಂಗ್ಯೂ ಪ್ರಕರಣಗಳು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಕಡೆ ಔಷಧಿ ಸಿಂಪಡಣೆ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕ್ರಮೇಣವಾಗಿ ಡೆಂಗ್ಯೂ ಪ್ರಕರಣಗಳು ನಿಯಂತ್ರಣಕ್ಕೆ ತರುಲು ಸೂಚನೆ ನೀಡಲಾಗಿದೆ ಎಂದಿದ್ದಾರೆ.
ಜುಲೈನಲ್ಲಿ 1,649 ಪ್ರಕರಣ ಪತ್ತೆ
ನಗರದಲ್ಲಿ ಜುಲೈನಲ್ಲಿ 1,649, ಆಗಸ್ಟ್ ನಲ್ಲಿ 1,589, ಸೆಪ್ಟಂಬರ್ ನಲ್ಲಿ 416 ಪ್ರಕರಣಗಳು ಪತ್ತೆಯಾಗಿವೆ. ಮುಖ್ಯವಾಗಿ ಮಳೆಯಾಗಿ ನೀರು ನಿಂತ ಕಾರಣ ಸೊಳ್ಳ್ಳೆಗಳ ಲಾರ್ವಾ ಉತ್ಪತ್ತಿಯಾಗಿರುವುದರಿಂದ ಹೆಚ್ಚು ಪ್ರಕರಣಗಳು ಕಂಡುಬರುತ್ತಿವೆ. ಈ ಸಂಬಂಧ ಎಲ್ಲಾ ಕಡೆ ಔಷಧಿ ಸಿಂಪಡಣೆ ಮಾಡಲಾಗುತ್ತಿದ್ದು, ಅದನ್ನು ಮತ್ತಷ್ಟು ಹೆಚ್ಚಿಸಲು ಸೂಚನೆ ನಿಡಲಾಗಿದೆ. ಅಲ್ಲದೇ ಎಲ್ಲಾ ಆರೋಗ್ಯ ವೈದ್ಯಾಧಿಕಾರಿಗಳಿಗೆ ಹೆಚ್ಚು ನಿಗಾ ವಹಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.