Monday, December 23, 2024

ಜೆಡಿಎಸ್ ಹೆಣ್ಣು ಈಗ ಬಿಜೆಪಿಗೆ ಇಷ್ಟ ಆಗಿದೆ : ಇಬ್ರಾಹಿಂ

ರಾಮನಗರ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿಚಾರವಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಪ್ರತಿಕ್ರಿಯೆ ನೀಡಿದ್ದಾರೆ.

ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ನಮ್ಮ ರಾಷ್ಟ್ರೀಯ ನಾಯಕರಾದ ಹೆಚ್​.ಡಿ ದೇವೇಗೌಡ ಸಾಹೇಬ್ರು ತೀರ್ಮಾನ ಮಾಡ್ತಾರೆ ಎಂದು ಹೇಳಿದ್ದಾರೆ.

ಸದ್ಯ ಬಿಜೆಪಿ ನಾಯಕರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಿ ಈ ಬಗ್ಗೆ ತೀರ್ಮಾನ ಮಾಡುತ್ತೇವೆ. ಈಗ ಬಿಜೆಪಿಯವ್ರಿಗೆ ಜೆಡಿಎಸ್​ನ ಹೆಣ್ಣು ಚೆನ್ನಾಗಿದೆ ಅಂತ ಗೊತ್ತಾಗಿದೆ. ನಮ್ಮ ಮೇಲಿಟ್ಟಿರುವ ಅಭಿಮಾನಕ್ಕೆ ಧನ್ಯವಾದ. ಅವರಿಗಾದರೂ ಜನತಾದಳದ ಹುಡುಗಿ ಇಷ್ಟ ಆಗಿದ್ದಾಳೆ ಅಲ್ವಾ ಎಂದು ನಗೆ ಚಟಾಕಿ ಹಾರಿಸಿದ್ದಾರೆ.

ಮೈತ್ರಿ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡುತ್ತೇವೆ, ಬಜಾರ್​ನಲ್ಲಿ ಅಲ್ಲ. ಸೆಪ್ಟಂಬರ್ 10ರಂದು ಪಕ್ಷದ ಕಾರ್ಯಕರ್ತರ ಸಭೆ ಇದೆ. ಈ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಮಾಡ್ತೀವಿ ಎಂದು ಸಿ.ಎಂ ಇಬ್ರಾಹಿಂ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES