Friday, November 22, 2024

ಜನ ಸಂಪರ್ಕ ಸಭೆ ನಡೆಸಿ ಜನರಿಗೆ ಸ್ಪಂದಿಸಿ: ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ!

ಬೆಂಗಳೂರು : ತಾಲ್ಲೂಕು ಮಟ್ಟದಲ್ಲಿ ಸಚಿವರು, ಶಾಸಕರನ್ನು ಆಹ್ವಾನಿಸಿ, ಜನ ಸಂಪರ್ಕ ಸಭೆಗಳನ್ನು ವಾರಕ್ಕೊಮ್ಮೆ  ನಡೆಸಿ ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು  ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ನಾಡಿನ ಜನತೆ ಸಣ್ಣ ಪುಟ್ಟ ಸಮಸ್ಯೆಗಳಿಗೂ ನನ್ನ ಬಳಿಗೆ ಬರುತ್ತಾರೆ ಎಂದರೆ ನೀವುಗಳು ಇದ್ದು ಏನು ಪ್ರಯೋಜನ ಎಂದು ಜಿಲ್ಲಾಧಿಕಾರಿಗಳಿಗೆ ಪ್ರಶ್ನಿಸಿದರು.

ಮುಖ್ಯಮಂತ್ರಿಯಾದ ಬಳಿಕ ನಾನು ಹಲವಾರು ಜಿಲ್ಲೆಗಳಿಗೆ ಭೇಟಿ ನೀಡಿದ್ದೆ. ಆ ವೇಳೆ ಜನ ಸಾಮಾನ್ಯರು ನೂರಾರು ರೀತಿಯ ಮನವಿಗಳನ್ನು ನನಗೆ ನೀಡುತ್ತಿದ್ದಾರೆ. ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಬಗೆಹರಿಸಬೇಕಾದ ಸಮಸ್ಯೆಗಳನ್ನು ಹೊತ್ತುಕೊಂಡು ಜನ ನನ್ನ ಬಳಿ ಬರುತ್ತಿದ್ದಾರೆ. ನೀವು ಸ್ಥಳೀಯವಾಗಿ ಜನ ಸಂಪರ್ಕ ಸಭೆ ನಡೆಸಿ ಸ್ಪಂದಿಸಿ ಸ್ಥಳದಲ್ಲೇ ಪರಿಹಾರ ಕೊಟ್ಟಿದ್ದರೆ ಹೀಗೆ ಆಗುತ್ತಿರಲಿಲ್ಲ. ಕೆಲವೊಂದು ಸಮಸ್ಯೆಗಳಿಗೆ ವಾರದ ಕಾಲ ಮಿತಿಯಲ್ಲಿ ಪರಿಹಾರ ಒದಗಿಸಿ ಕೊಡಿ. ಕೆಲಸ ಆಗಿದೆಯಾ , ಇಲ್ಲವಾ ಎನ್ನುವುದನ್ನು ಮರು ಪರೀಕ್ಷಿಸಿ. ಆಗ ಸ್ಥಳೀಯ ಸಮಸ್ಯೆಗಳಿಗಾಗಿ ಜನತೆ ಬಸ್ ಚಾರ್ಜ್ ಖರ್ಚು ಮಾಡಿಕೊಂಡು ನನ್ನ ತನಕ ಬರುವ ಅಗತ್ಯವೇ ಬೀಳುವುದಿಲ್ಲ ಎಂದು ತಿಳಿಸಿದರು.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವ ಸಂಪುಟದ ಇತರ ಸದಸ್ಯರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

RELATED ARTICLES

Related Articles

TRENDING ARTICLES