Monday, November 25, 2024

ನೌಕರ ಮೃತಪಟ್ಟರೆ ಸೋದರಿಗೆ ಅನುಕಂಪ ನೌಕರಿ ಇಲ್ಲ: ಹೈಕೋರ್ಟ್​

ಬೆಂಗಳೂರು : ಸರ್ಕಾರಿ ನೌಕರ ಮೃತಪಟ್ಟಲ್ಲಿ ಅವರ ಸಹೋದರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ಕಲ್ಪಿಸಲು ಅವಕಾಶವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.

ಬೆಸ್ಕಾಂನಲ್ಲಿ ಲೈನ್ ಮ್ಯಾನ್ ಆಗಿ ಸೇವೆ ಸಲ್ಲಿಸುತ್ತಿದ್ದ ವಿವಾಹಿತ ಸಹೋದರ ಮೃತಪಟ್ಟ ಹಿನ್ನೆಲೆಯಲ್ಲಿ ಅನುಕಂಪದ ಆಧಾರದಲ್ಲಿ ತನಗೆ ಉದ್ಯೋಗ ಒದಗಿಸಲು ಕೆಪಿಟಿಸಿಲ್ ಮತ್ತು ಬೆಸ್ಕಾಂಗೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ತಕರಾರು ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ತುಮಕೂರು ಜಿಲ್ಲೆಗೆಲ್ಲಹಳ್ಳಿ ನಿವಾಸಿ ಜಿ.ಎಂ. ಪಲ್ಲವಿ ವಿಭಾಗೀಯ ಪೀಠಕ್ಕೆ ಮೇಲ್ಮನವಿಸಲ್ಲಿಸಿದ್ದರು.

ಇದನ್ನೂ ಓದಿ: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಕತ್ತು ಕೊಯ್ದ ಪಾಗಲ್ ಪ್ರೇಮಿ

ಮೇಲ್ಮನವಿಯನ್ನು ವಜಾಗೊಳಿಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಮೇಲ್ಮನವಿ ದಾರೆಯು ಮೃತ ನೌಕರ (ಸಹೋದರ) ಸಾವನ್ನಪ್ಪಿದ ವೇಳೆ ಅವರ ಆದಾಯದ ಮೇಲೆ ತಾನು ಅಲವಂಬಿಸಿದ್ದೆ ಎಂಬುದನ್ನು ದೃಢಪಡಿಸುವ ಸಾಕ್ಷವನ್ನು ಸಲ್ಲಿಸಿಲ್ಲ.

ಹಾಗೆಯೇ, ಅನುಕಂಪದ ಉದ್ಯೋಗ ಪಡೆಯಲು ಮೃತ ನೌಕರನ ಕುಟುಂಬ ಆರ್ಥಿಕ ಮುಗ್ಗಟ್ಟಿಗೆ ತುತ್ತಾಗಿದೆ ಎಂಬುದನ್ನು ಸಾಬೀತುಪಡಿಸಲು ದಾಖಲೆಗಳು ಮೇಲ್ಮನವಿದಾರೆಯನ್ನು ಇಲ್ಲವಾಗಿದೆ. ಆದ್ದರಿಂದ ಅನುಕಂಪದ ಆಧಾರದಲ್ಲಿ ಉದ್ಯೋಗಕ್ಕೆ ಪರಿಗಣಿಸಲು ನಿರಾಕರಿಸಿದ ಏಕಸದಸ್ಯ ನ್ಯಾಯಪೀಠದ ಆದೇಶದಲ್ಲಿ ಸೂಕ್ತವಾಗಿದ್ದು, ಅದರಲ್ಲಿ ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದು ತಿಳಿಸಿದೆ.

RELATED ARTICLES

Related Articles

TRENDING ARTICLES