ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಕೊಡಗಿನಲ್ಲಿ ಮುಂದಿನ 24 ಗಂಟೆ ಗುಡುಗು ಸಹಿತ ಜೋರು ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಈ ಜಿಲ್ಲೆಗಳಲ್ಲಿ 6ರಿಂದ 11 ಸೆಂ.ಮೀ. ನಷ್ಟು ಮಳೆಯಾಗಲಿದೆ. ಹೀಗಾಗಿ, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ದಕ್ಷಿಣ ಕನ್ನಡ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ತುಂತುರುಮಳಡಯಾಗುವ ಸಾಧ್ಯತೆಯಿದೆ.
ಒಂದು ವಾರ ಮಳೆ
ಬಂಗಾಳಕೊಲ್ಲಿಯಲಿ ವಾಯುಭಾರ ಕುಸಿತ ಆಗುವ ಹಿನ್ನೆಲೆ ಮುಂದಿನ ಒಂದು ವಾರ ಬೆಂಗಳೂರಿನಲ್ಲಿ ಸಂಜೆ ಅಥವಾ ರಾತ್ರಿ ಮಳೆ ಸಾಧ್ಯತೆಯಿದೆ. ಈ ವಾಯುಭಾರ ಕುಸಿತ ಆಂಧ್ರಪ್ರದೇಶ ತಮಿಳುನಾಡು ಮೂಲಕ ರಾಜ್ಯಕ್ಕೆ ಪ್ರವೇಶ ಮಾಡಲಿದೆ. ಪ್ರತಿ ಗಂಟೆಗೆ 35ರಿಂದ 40 ಕಿ.ಮೀ ಬಿರುಗಾಳಿ ಬೀಸಲಿದೆ. ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲೂ ಮಳೆಯಾಗುವ ಸಾಧ್ಯತೆಯಿದೆ.