ಬೆಂಗಳೂರು: ಗೂಂಡಾ ಕಾಯ್ದೆಯಡಿ ಹಿಂದೂ ಕಾರ್ಯಕರ್ತ, ಗೋರಕ್ಷಕ ಮತ್ತು ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ ಪುನೀತ್ ಕೆರೆಹಳ್ಳಿ ಬಂಧೀಸಿಲಾಗಿತ್ತು. ಈತನ ವಿರುದ್ದ ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸಲಾಗಿದ್ದು, ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.
ಪುನಿತ್ ಕೆರೆಹಳ್ಳಿ ವಿರುದ್ದ ರಾಜ್ಯದ 11 ಠಾಣೆಗಳಲ್ಲಿ ಎಫ್ಐಆರ್ ದಾಖಲಾಗಿತ್ತು. ಕೆಲವು ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿತ್ತು. ಜೈಲಿನಿಂದ ಬಿಡುಗಡೆಯಾದ ಬಳಿಕವೂ ಅಪರಾಧ ಪ್ರಕರಣಗಳಲ್ಲಿ ಪದೇ ಪದೆ ಭಾಗಿಯಾಗುತ್ತಿರುವುದರಿಂದ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಅವರನ್ನು ಬಂಧಿಸುವಂತೆ ಕಮಿಷನರ್ ಆದೇಶ ಹೊರಡಿಸಿದ್ದರಿಂದ, ಅವರನ್ನು ಬಂಧಿಸಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿತ್ತು.
ಇದನ್ನೂ ಓದಿ: ಮಗನ ಶೋಕಿಗೆ ಕುಮ್ಮಕ್ಕು ನೀಡಿದ ಆರೋಪ: ಪಿಎಸ್ಐ ಯಾಸ್ಮಿನ್ ತಾಜ್ ವರ್ಗಾವಣೆ!
ಬಂಧನ ಆದೇಶವನ್ನು ಪ್ರಶ್ನಿಸಿದ ಪುನೀತ್ ಕೆರೆಹಳ್ಳಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದರ ವಿಚಾರಣೆಗಾಗಿ ಸರ್ಕಾರ ಸಲಹಾ ಸಮಿತಿಯನ್ನು ರಚಿಸಿತ್ತು. ವಿಚಾರಣೆ ನಡೆಸಿದ್ದ ಸಮಿತಿ, ‘ಅವರನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ’ ಎಂದು ಅಭಿಪ್ರಾಯಪಟ್ಟು ವರದಿ ನೀಡಿದೆ.
ಈ ಹಿನ್ನೆಲೆಯಲ್ಲಿ ವರದಿಯನ್ವಯ ಆದೇಶ ಹೊರಡಿಸಿರುವ ಸರ್ಕಾರ, ಕಮಿಷನರ್ ಆದೇಶವನ್ನು ರದ್ದುಪಡಿಸಿದೆ. ಪುನೀತ್ ಅವರನ್ನು ಬಂಧನ ಮುಕ್ತಗೊಳಿಸುವಂತೆ ಸೂಚಿಸಿದೆ. ಇದರ ಬೆನ್ನಲ್ಲೇ ಪುನೀತ್‌ನನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.