Sunday, October 6, 2024

ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ, ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದ್ದು, ರಾಜ್ಯ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಲ್ಲಿ ಮಡಿವಾಳ ಸಮುದಾಯಕ್ಕೆ ಗಿಫ್ಟ್​ ಕೊಟ್ಟು ಗೆಲುವು ಸಾಧಿಸಿದ್ದರು ಎಂಬಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಸಂಬಂಧಿಸಿದಂತೆ ದೂರು ನೀಡಲಾಗಿದೆ.

ಈ ಪ್ರಕರಣ ಸಂಬಂಧ ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಒತ್ತಾಯಿಸಿದೆ. ಚುನಾವಣೆ ವೇಳೆ ಕುಕ್ಕರ್, ಐರನ್ ಬಾಕ್ಸ್​(ಇಸ್ತ್ರಿ ಪೆಟ್ಟಿಗೆ) ಹಂಚಿದ್ದರಿಂದಲೇ ಸಿದ್ದರಾಮಯ್ಯ ವರುಣಾದಲ್ಲಿ ಗೆದ್ದಿದ್ದರು ಎಂದು ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಯತೀಂದ್ರ ಅವರು ಸ್ಪಷ್ಟನೆಯನ್ನೂ ನೀಡಿದ್ದಾರೆ.

ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಮಾತನಾಡಿ, ರಾಜ್ಯಕ್ಕೆ, ದೇಶಕ್ಕೆ ಸಿದ್ದರಾಮಯ್ಯ ನೀತಿ ಹೇಳ್ತಾರೆ.ನಾನೇ ಶ್ರೇಷ್ಠ ಅಂತಾರೆ. ಆದ್ರೆ ಅವರೇ ವರುಣಾ ಕ್ಷೇತ್ರದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ, ಗಾಳಿಗೆ ತೂರಿದ್ದಾರೆ. ಮತದಾರರಿಗೆ ಆಮಿಷ ಒಡ್ಡಿ  ಮತ ಹಾಕಿಸಿಕೊಂಡು ನಿಯಮ ಉಲ್ಲಂಘಿಸಿದ್ದಾರೆ ಸಿದ್ದರಾಮಯ್ಯ. ಈ ಸಂಬಂಧ ಇವತ್ತು ನಾವು ಸಿದ್ದರಾಮಯ್ಯ ವಿರುದ್ಧ ದೂರು ಕೊಟ್ಟಿದ್ದೇವೆ. ಶಾಸಕ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವಂತೆ ಚುಬಾವಣಾ ಆಯೋಗ ನಿರ್ದೇಶನ ಕೊಡಬೇಕೆಂದು ಮನವಿ ಮಾಡಿದ್ದೇವೆ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES