ಬೆಂಗಳೂರು : ಕಾವೇರಿ ವಿಚಾರವಾಗಿ ಸುಪ್ರೀಂ ಕೋರ್ಟ್ ಆದೆಶವನ್ನು ವಿರೋಧಿಸಿ ಬೆಂಗಳೂರಿನಲ್ಲೂ ಕನ್ನಡಪರ ಸಂಘಟನೆಗಳು ಬೀದಿಗಿಳಿದಿದ್ದವು.
ಈ ವೇಳೆ ಮಾತನಾಡಿದ ಕರವೇ ಅಧ್ಯಕ್ಷ ಪ್ರವೀಣ್‌ಕುಮಾರ್ ಶೆಟ್ಟಿ, ಕಾವೇರಿ ನಿರ್ವಹಣಾ ಪ್ರಾಧಿಕಾರಕ್ಕೂ ಎಚ್ಚರಿಕೆ ನೀಡಲು ಬಯಸುತ್ತೇವೆ. ನಗರದಲ್ಲೇ ಕುಡಿಯಲು ನೀರಿಲ್ಲ, ಹೀಗಿರುವಾಗ ನೀರು ಹರಿಸುವುದು ಸೂಕ್ತವಲ್ಲ ಎಂದರು.
ಇದನ್ನೂ ಓದಿ: ಇಂದು ಮಂಡ್ಯ ಬಂದ್‌ಗೆ ಕರೆ!
ಈ ಕೂಡಲೇ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು. ಸುಪ್ರೀಂಕೋರ್ಟ್ ಆದೇಶ ಆದಾಗಲೇ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು. ನಮ್ಮ ರಾಜ್ಯದ ಸಂಸದರು ನಿದ್ದೆ ಮಾಡ್ತಿದ್ದಾರೆ. ಇಂದು ಅತ್ತಿಬೆಲೆ ಗೇಟ್ ಬಂದ್ ಮಾಡುತ್ತೇವೆ. ಮಳೆ ಬಂದಾಗ ನಾವು ತಮಿಳುನಾಡಿಗೆ ನೀರು ಬಿಟ್ಟಿದ್ದೇವೆ. ಈಗ ನಮ್ಮಲ್ಲಿ ಬರ ಇದೆ, ಈಗ ನೀರು ಬಿಡಲು ಹೇಗೆ ಸಾಧ್ಯ. ನಮ್ಮ ಅಧಿಕಾರಿಗಳ ಬೇಜವಾಬ್ದಾರಿಯಿಂದ ರಾಜ್ಯಕ್ಕೆ ಕಾವೇರಿ ನೀರಿನ ವಿಚಾರದಲ್ಲಿ ಅನ್ಯಾಯವಾಗಿದೆ.
ಗಡಿ ಬಂದ್ ಮಾಡಲು ನಾವು ಮುಂದಾಗುತ್ತೇವೆ ಎಂದು ತಿಳಿಸಿದ ನಮ್ಮ ಸಂಸದರು ಕೇಂದ್ರದ ಮೇಲೆ ಒತ್ತಡ ತರಬೇಕು. ಕಾವೇರಿ ನೀರು ಬಿಟ್ಟರೆ ಮುಂದೆ ಕರ್ನಾಟಕ ಬಂದ್ ಮಾಡಲಿದ್ದೇವೆ. ಎಲ್ಲಾ ಕನ್ನಡಪರ ಸಂಘಟನೆಗಳು, ರೈತ ಸಂಘಗಳು ದೊಡ್ಡ ಹೋರಾಟ ನಡೆಸಲಿದ್ದೇವೆ ಎಂದು ಅವರು ಹೇಳಿದರು.