Friday, November 22, 2024

ಕಾವೇರಿ ಕರ್ನಾಟಕದ ಆಸ್ತಿ, ಕಾವೇರಿ ಎಂದೂ ನಮ್ಮದು : ಕೆ.ಎಲ್ ರಾಹುಲ್

ಬೆಂಗಳೂರು : ಕಾವೇರಿ ನೀರಿಗಾಗಿ ರೈತರು, ಕನ್ನಡಪರ ಹೋರಾಟಗಾರರು ಹಾಗೂ ಕನ್ನಡ ಚಿತ್ರರಂಗದ ನಟರು ಈಗಾಗಲೇ ಧ್ವನಿ ಎತ್ತಿದ್ದಾರೆ. ಇದೀಗ ಭಾರತ ಕ್ರಿಕೆಟ್ ತಂಡದ ಆಟಗಾರ, ಕನ್ನಡಿಗ ಕೆ.ಎಲ್ ರಾಹುಲ್ ಸಹ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.

ಈ ಕುರಿತು Xನಲ್ಲಿ  ಪೋಸ್ಟ್​ ಮಾಡಿರುವ ಅವರು, ‘ಕಾವೇರಿ ಎಂದೂ ನಮ್ಮದು. ಕಾವೇರಿ ಹುಟ್ಟುವುದು, ಅತಿ ಹೆಚ್ಚು ನೀರು ಸಂಗ್ರಹವಾಗುವುದು ಕರ್ನಾಟಕದಲ್ಲಿ. ಆದರೆ, ಆ ನೀರನ್ನು ಬಳಸಿಕೊಳ್ಳಲು ಪ್ರತಿ ವರ್ಷ ಕಾನೂನು ಹೋರಾಟದ ಜತೆಗೆ ಬೀದಿಗಿಳಿದು ಪ್ರತಿಭಟನೆ ಮಾಡಬೇಕಾದ ಅನಿವಾರ್ಯ ಕನ್ನಡಿಗರದು. ಇದು ನಮ್ಮ ದುರಂತ. ಕಾವೇರಿ ಇಡೀ ಕರ್ನಾಟಕದ ಆಸ್ತಿ’ ಎಂದು ಹೇಳಿದ್ದಾರೆ.

ಕಾವೇರಿ ವಿಚಾರದಲ್ಲಿ ನಡೆಯುತ್ತಿರುವ ಹೋರಾಟ ಗೊಂದಲದ ಗೂಡಾಗಿದೆ. ಇಂದು ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದೆ. ಹಲವು ಸಂಘಟನೆಗಳು ಬಂದ್​ಗೆ ಬೆಂಬಲ ನೀಡಲ್ಲ. ಆದರೂ, ಬಂದ್‌ ನಡೆಯಲಿದೆ.

ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿ

ಇನ್ನು ಬೆಂಗಳೂರು ಬಂದ್‌ಗೆ ಅನುಮತಿ ಇಲ್ಲ ಅಂತ ಸಂಘಟನೆಗಳಿಗೆ ಪೊಲೀಸರು ಬಿಗ್ ಶಾಕ್ ಕೊಟ್ಟಿದ್ದಾರೆ. ಯಾರೂ ಬಲವಂತವಾಗಿ ಬಂದ್ ಮಾಡಿಸುವಂತಿಲ್ಲ. ಬಂದ್ ಮಾಡಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಅಂತಾ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಎಚ್ಚರಿಸಿದ್ದಾರೆ.

ಅಲ್ಲದೆ, ಬೆಂಗಳೂರಿನಾದ್ಯಂತ ಇಂದು ಮಧ್ಯರಾತ್ರಿ 12 ರಿಂದ ನಾಳೆ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಯಾರಾದರೂ ಕಾನೂನು ಮೀರಿದರೆ ಕಠಿಣ ಕ್ರಮ ಜರುಗಿಸಲಾಗುವುದು ಅಂತ ದಯಾನಂದ್ ಹೇಳಿದ್ದಾರೆ ಅವರು ಎಚ್ಚರಿಸಿದ್ದಾರೆ.

RELATED ARTICLES

Related Articles

TRENDING ARTICLES