ಬೆಂಗಳೂರು : ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಅಂತಿಮ ಮೂರನೇ ಏಕದಿನ ಪಂದ್ಯ ರಾಜ್ಕೋಟ್ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಆಸಿಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮೊದಲ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಭಾರತ 2-0 ಅಂತರದಿಂದ ಸರಣಿ ವಶಪಡಿಸಿಕೊಂಡಿದೆ. ಇದೀಗ ಸರಣಿ ಕ್ಲೀನ್ಸ್ವೀಪ್ ಮೇಲೆ ಕಣ್ಣಿಟ್ಟಿರುವ ಭಾರತ ತಂಡ ಆಟಗಾರರು ರಾಜ್ಕೋಟ್ ಮೈದಾನದಲ್ಲಿ ಕಸರತ್ತು ನಡೆಸುತ್ತಿದ್ದಾರೆ.
ನಾಳೆಯ ಪಂದ್ಯಕ್ಕೆ ಆರಂಭಿಕ ಆಟಗಾರ ಶುಭಮನ್ ಗಿಲ್ ಹಾಗೂ ವೇಗಿ ಶಾರ್ದೂಲ್ ಠಾಕೂರ್ ಅವರಿಗೆ ವಿಶ್ರಾಂತಿ ನೀಡಲು ಟೀಂ ಮ್ಯಾನೇಜ್ಮೆಂಟ್ ನಿರ್ಧರಿಸಿದೆ. ಹೀಗಾಗಿ, ಇಬ್ಬರು ಆಟಗಾರರು ರಾಜ್ಕೋಟ್ಗೆ ತೆರಳಿಲ್ಲ. ಇನ್ನೂ ಆಲ್ರೌಂಡರ್ ಅಕ್ಸರ್ ಪಟೇಲ್ ಸಹ ಈ ಪಂದ್ಯದಿಂದ ಹೊರ ಬಿದಿದ್ದಾರೆ. ಏಷ್ಯಾಕಪ್ ಸೂಪರ್ 4 ಪಂದ್ಯದ ವೇಳೆ ಅಕ್ಸರ್ ಪಟೇಲ್ ಗಾಯಗೊಂಡಿದ್ದರು. ಆ ಬಳಿಕ ಆಸಿಸ್ ವಿರುದ್ಧದ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದರು. ವಿಶ್ವಕಪ್ ತಂಡದಲ್ಲೂ ಇರುವ ಅಕ್ಸರ್ ಪಟೇಲ್ ಫಿಟ್ನೆಸ್ ಬಗ್ಗೆ ಭಾರಿ ಗೊಂದಲವಿದೆ.
ಕೊಹ್ಲಿ, ರೋಹಿತ್, ಪಾಂಡ್ಯ ಬ್ಯಾಕ್
ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ರೋಹಿತ್ ಶರ್ಮಾ ಹಾಗೂ ಇನ್ನೂ ಕೆಲ ಆಟಗಾರರು ಮೊದಲೆರಡು ಏಕದಿನ ಪಂದ್ಯದಿಂದ ವಿಶ್ರಾಂತಿ ಪಡೆದುಕೊಂಡಿದ್ದರು. ಇವರು ಮೂರನೇ ಪಂದ್ಯದಲ್ಲಿ ಆಡಲಿದ್ದಾರೆ. ಕೊಹ್ಲಿ, ಪಾಂಡ್ಯ ಸೇರಿದಂತೆ ಉಳಿದ ಆಟಗಾರರೆಲ್ಲ ತಂಡ ಸೇರಿದ್ದಾರೆ. ರೋಹಿತ್ ಶರ್ಮಾ ಅವರು ಇನ್ನೂ ಬಂದಿಲ್ಲ. ಮೂಲಗಳ ಪ್ರಕಾರ ರೋಹಿತ್ ಇಂದು ತಂಡ ಸೇರಿಕೊಳ್ಳಲಿದ್ದಾರೆ.
ಭಾರತ ಸಂಭಾವ್ಯ ತಂಡ
ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಕೆ.ಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಇಶಾನ್ ಕಿಶನ್, ಋತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್
ಆಸ್ಟ್ರೇಲಿಯಾ ಸಂಭಾವ್ಯ ತಂಡ
ಪ್ಯಾಟ್ ಕಮ್ಮಿನ್ಸ್(ನಾಯಕ), ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಮಾರ್ನಸ್ ಲಾಬುಶೇನ್, ಕ್ಯಾಮರೋನ್ ಗ್ರೀನ್, ಜೋಶ್ ಇಂಗ್ಲಿಸ್, ಮಾರ್ಕಸ್ ಸ್ಟೊಯಿನಿಸ್, ಸೀನ್ ಅಬಾಟ್, ಆ್ಯಡಮ್ ಝಂಪಾ, ಮ್ಯಾಟ್ ಶಾರ್ಟ್
Mohali ✅
Indore ✅#TeamIndia arrive ✈️ for the third and the final ODI in Rajkot 👌#INDvAUS pic.twitter.com/pIrDvPFNyB— BCCI (@BCCI) September 25, 2023