Friday, September 20, 2024

ಜೆಡಿಎಸ್ ಯಾರ ಜೊತೆ ಮೈತ್ರಿ ಮಾಡಿಕೊಂಡರೂ ನಮ್ಮ ತಕರಾರಿಲ್ಲ : ಸಿದ್ದರಾಮಯ್ಯ

ಚಾಮರಾಜನಗರ: ಜಾತ್ಯಾತೀತ ಎಂದು ಹೇಳಿಕೊಳ್ಳುವ ಜೆಡಿಎಸ್ ಕೋಮುವಾದಿ ಪಕ್ಷದ ಜೊತೆ ಮೈತ್ರಿಯಿಂದ ಜಾತ್ಯಾತೀತವಾಗಿ ಉಳಿದಿದೆಯೇ ? ಜೆಡಿಎಸ್ ಅವರು ಬಿಜೆಪಿಯ ಜೊತೆ ಅಥವಾ ಇನ್ನಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡರೂ ನಮಗೆ ಯಾವುದೇ ತಕರಾರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಇಂದು ಸರ್ಕಾರಿ ಬುಡಕಟ್ಟು ಆಶ್ರಮ ಶಾಲೆ ಕೋಣನಕೆರೆ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಜೆಡಿಎಸ್ , ಬಿಜೆಪಿಯ ಬಿ ಟೀಂ ಆಗಿದ್ದಿದ್ದರೆ 5 ವರ್ಷ ತಾವೇ ಮುಖ್ಯಮಂತ್ರಿಯಾಗಿರುತ್ತಿದ್ದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಕೊಂಡಿರುವ ಜೆಡಿಎಸ್ ನ್ನು ಏನೆಂದು ಕರೆಯಬೇಕು.
ಜೆಡಿಎಸ್ – ಜಾತ್ಯಾತೀತ ಎಂದು ಹೇಳಿಕೊಳ್ಳಬಾರದು ಎಂದರು.

ಇದನ್ನೂ ಓದಿ : ಮದುವೆ ಮನೆಯಲ್ಲಿ ಬೆಂಕಿ: ವದು-ವರ ಸೇರಿ 100 ಕ್ಕು ಹೆಚ್ಚು ಮಂದಿ ಸಾವು!

2004 ರಲ್ಲಿ ಸಿದ್ದರಾಮಯ್ಯರವರು ಬಿಜೆಪಿಯ ವೆಂಕಯ್ಯನಾಯ್ಡು ಅವರನ್ನು ಭೇಟಿಯಾಗಿದ್ದರೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ ಅದ್ವಾನಿಯವರು ಹಿಂದೆ ಜನತಾ ಪಕ್ಷದಲ್ಲಿದ್ದಾಗ ಅವರನ್ನು ಭೇಟಿ ಮಾಡಿದ್ದು ನಿಜ ಎಂದು ತಿಳಿಸಿದರು.

RELATED ARTICLES

Related Articles

TRENDING ARTICLES