ಚನ್ನೈ : ಖ್ಯಾತ ಕೃಷಿ ವಿಜ್ಞಾನಿ ಹಾಗೂ ಹಸಿರು ಕ್ರಾಂತಿಯ ಹರಿಕಾರ ಎಂ.ಎಸ್. ಸ್ವಾಮಿನಾಥನ್ ನಿಧನರಾಗಿದ್ದಾರೆ. ಚೆನ್ನೈನಲ್ಲಿ ಇಂದು ಬೆಳಗ್ಗೆ 11.20ಕ್ಕೆ ಇಹಲೋಕ ತ್ಯಜಿಸಿದ್ದಾರೆ. ಅವರು ಆಗಸ್ಟ್ 7, 1925 ರಂದು ಜನಿಸಿದ್ದರು.
ತಮಿಳುನಾಡಿನ ಕುಂಭಕೋಣಂನಲ್ಲಿ ಜನಿಸಿದ ಅವರು ಹಸಿರು ಕ್ರಾಂತಿ ಯೋಜನೆಯ ಮೂಲಕ, ಅವರು ಭಾರತದಲ್ಲಿ ಕೃಷಿ ಕ್ಷೇತ್ರದ ಪರಿವರ್ತನೆಯನ್ನು ಪ್ರಾರಂಭಿಸಿದರು ಹಾಗೂ ದೇಶಾದ್ಯಂತ ವಿಸ್ತರಿಸಿದರು. ಬಡ ರೈತರು ತಮ್ಮ ಹೊಲಗಳಲ್ಲಿ ಮರಗಳನ್ನು ಬೆಳೆಸಲು ಪ್ರೋತ್ಸಾಹಿಸಿದರು ಮತ್ತು ಸ್ವಾವಲಂಬನೆಯ ಹಾದಿಯನ್ನು ತೋರಿಸಿದರು.
ಇದನ್ನೂ ಓದಿ: ಕರ್ನಾಟಕ ಬಂದ್ ಗೆ ಅನುಮತಿ ಇಲ್ಲ: ಪೊಲೀಸ್ ಕಮಿಷನರ್ ದಯಾನಂದ್ ವಾರ್ನಿಂಗ್!
ಭಾರತದಲ್ಲಿ ತೀವ್ರ ಧಾನ್ಯದ ಕೊರತೆ ಉಂಟಾದಾಗ, ಅವರು ಹೊಲಗಳಲ್ಲಿ ಸುಧಾರಿತ ಬೀಜಗಳನ್ನು ಬೆಳೆಸಿದರು ಮತ್ತು ರೈತರಿಗೆ ಹೆಚ್ಚಿನ ಇಳುವರಿ ಪಡೆಯುವ ಮಾರ್ಗವನ್ನು ತೋರಿಸಿದರು. ಅವರ ಕೊಡುಗೆಯ ಫಲವಾಗಿ ಕೇವಲ 25 ವರ್ಷಗಳಲ್ಲಿ ಭಾರತೀಯ ರೈತರನ್ನು ಕೃಷಿಯಲ್ಲಿ ಸ್ವಾವಲಂಬಿಗಳನ್ನಾಗಿ ಮಾಡಿ ಹಸಿರು ಕ್ರಾಂತಿಯ ಹರಿಕಾರರೆನಿಸಿಕೊಂಡರು.