ಸಿಕ್ಕಿಂ: ಹಠಾತ್ ಪ್ರವಾಹದಿಂದ ಸಾವಿಗೀಡಾದವರ ಸಂಖ್ಯೆ 53ಕ್ಕೆ ಏರಿಕೆಯಾಗಿದೆ. ಮೃತರಲ್ಲಿ ಏಳು ಸೈನಿಕರು ಹಾಗೂ ಸ್ಥಳೀಯರು ಸೇರಿದ್ದಾರೆ. ಅಲ್ಲದೇ 140 ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನೆರೆಯ ರಾಜ್ಯ ಪಶ್ಚಿಮ ಬಂಗಾಳದ ತೀಸ್ತಾ ನದಿ ಪಾತ್ರದಲ್ಲಿ 27 ಮೃತದೇಹಗಳು ಪತ್ತೆಯಾಗಿವೆ. ಈ ಪೈಕಿ ಏಳು ಮೃತದೇಹಗಳನ್ನು ಗುರುತಿಸಲಾಗಿದೆ. ಪ್ರವಾಹದ ಬಳಿಕ ಸಾವಿರಾರು ಜನರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಲಾಗಿದೆ.
ಇದನ್ನೂ ಓದಿ: ಬೀದರ್ ಜಿಲ್ಲಾ ಪೊಲೀಸರ ಭರ್ಜರಿ ಕಾರ್ಯಾಚರಣೆ : 53 ಲಕ್ಷ ಮೌಲ್ಯದ ವಸ್ತು ವಶಕ್ಕೆ!
1,173 ಮನೆಗಳಿಗೆ ತೀವ್ರ ಹಾನಿಯಾಗಿದೆ ಮತ್ತು 2,413 ಜನರನ್ನು ಇಲ್ಲಿಯವರೆಗೂ ರಕ್ಷಿಸಲಾಗಿದೆ. 25,000 ಜನರಿಗೆ ಪ್ರವಾಹದಿಂದ ತೊಂದರೆಯಾಗಿದೆ ಎಂದು ಸರ್ಕಾರ ಮಾಹಿತಿ ನೀಡಿದೆ. ಮೃತರ ಕುಟುಂಬಗಳಿಗೆ 4 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಅಧಿಕಾರಿಗಳು ಹಗಲೂ ರಾತ್ರಿ ಜನರ ರಕ್ಷಣೆಗಾಗಿ ಶ್ರಮಿಸುತ್ತಿದ್ದಾರೆ.
ಕೇಂದ್ರ ಸರ್ಕಾರಕ್ಕೆ 44 ಕೋಟಿ ರೂ. ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ ಎಂದು ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ತಿಳಿಸಿದ್ದಾರೆ.