ಬೆಂಗಳೂರು: ವಿವಿಧ ಕಾರ್ಮಿಕ ಸಂಘಟನೆಗಳು ತಮ್ಮ ಬೇಡಿಕೆ ಈಡೇರಿಸುವಂತೆ ಭಾರತ್ ಬಂದ್ಗೆ ಕರೆ ಕೊಟ್ಟಿದೆ. ಈ ಹಿನ್ನಲೆ ಬೆಂಗಳೂರಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಪ್ರತಿಭಟನೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ, 11 ಡಿಸಿಪಿ, 23 ಎಸಿಪಿ, 111 ಇನ್ಸ್ಪೆಕ್ಟರ್ಗಳು, 316 ಪಿಎಸ್ಐ, 476 ಎಎಸ್ಐಗಳು, 4,547 ಕಾನ್ಸ್ಟೇಬಲ್ಗಳು, 82 ಕೆಎಸ್ಆರ್ಪಿ ಹಾಗೂ ಸಿಎಆರ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ.
ಪ್ರತಿಭಟನೆಕಾರರಿಂದ ಸಾರ್ವಜನಿಕರಿಗೆ ತೊಂದರೆ ಆದಲ್ಲಿ ಅಥವಾ ಬಲವಂತವಾಗಿ ಪ್ರತಿಭಟನೆಗೆ ಕರೆತರುವುದಾಗಲಿ ಮಾಡಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೊಲೀಸ್ ಕಮೀಷನರ್ ಭಾಸ್ಕರ್ರಾವ್ ಎಚ್ಚರಿಕೆ ನೀಡಿದ್ದಾರೆ.