ಬೆಂಗಳೂರು : ದಸರಾ ನನ್ನೂರ ಹಬ್ಬ. ನಾನು ಬಾಲ್ಯದಲ್ಲಿ ಅಪ್ಪನ ಹೆಗಲು ಮೇಲೆ ಕೂತು ದಸರಾ ನೋಡುತ್ತಿದ್ದೆ. ಈಗ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ದಸರಾದಲ್ಲಿ ಪಾಲ್ಗೊಳ್ಳುವ ಅವಕಾಶ ದೊರೆತದ್ದು ನನ್ನ ಸೌಭಾಗ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಲ್ಯದ ನೆನಪುಗಳನ್ನು ಮೆಲುಕು ಹಾಕಿದ್ದಾರೆ.
ಈ ಕುರಿತು Xನಲ್ಲಿ ಪೋಸ್ಟ್ ಮಾಡಿರುವ ಅವರು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ ಅವರ ನೇತೃತ್ವದ ನಿಯೋಗವು ಇಂದು ವಿಶ್ವ ವಿಖ್ಯಾತ ದಸರಾದ ಆಹ್ವಾನಪತ್ರಿಕೆ ನೀಡಿದೆ. ಈ ಸಂದರ್ಭದಲ್ಲಿ ಅತ್ಯಂತ ಸಂತೋಷದಿಂದ ಅವರ ಆಹ್ವಾನ ಸ್ವೀಕರಿಸಿ, ಆಗಮಿಸುವುದಾಗಿ ತಿಳಿಸಿದೆ ಎಂದು ತಿಳಿಸಿದ್ದಾರೆ.
ಸಚಿವ ಹೆಚ್.ಸಿ.ಮಹದೇವಪ್ಪನವರ ನೇತೃತ್ವದ ಜಿಲ್ಲಾಡಳಿತದ ನಿಯೋಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮೈಸೂರು ದಸರಾ ಆಹ್ವಾನಪತ್ರಿಕೆ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮೈಸೂರು ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ರಾಜೇಂದ್ರ, ಪೊಲೀಸ್ ಆಯುಕ್ತ ರಮೇಶ್ ಬಾನೂತ್, ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಗಾಯತ್ರಿ, ಅಪರ ಜಿಲ್ಲಾಧಿಕಾರಿ ಶಿವಕುಮಾರ್ ಹಾಜರಿದ್ದರು.
ದಸರಾ ನನ್ನೂರ ಹಬ್ಬ, ನಾನು ಬಾಲ್ಯದಲ್ಲಿ ಅಪ್ಪನ ಹೆಗಲು ಮೇಲೆ ಕೂತು ದಸರಾ ನೋಡುತ್ತಿದ್ದೆ, ಈಗ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ದಸರಾದಲ್ಲಿ ಪಾಲ್ಗೊಳ್ಳುವ ಅವಕಾಶ ದೊರೆತದ್ದು ನನ್ನ ಸೌಭಾಗ್ಯ.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ ಅವರ ನೇತೃತ್ವದ ನಿಯೋಗವು ಇಂದು ವಿಶ್ವ ವಿಖ್ಯಾತ ದಸರಾದ ಆಹ್ವಾನಪತ್ರಿಕೆ ನೀಡಿದ… pic.twitter.com/uiEI0kbFNt— Siddaramaiah (@siddaramaiah) October 11, 2023