ಮೈಸೂರು: ಹಸುವಿನ ಮೇಲೆ ಹುಲಿ ದಾಳಿ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಮಾದನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೂರ್ತಿ ಎಂಬುವವರಿಗೆ ಸೇರಿದ ಹಸು ಇದಾಗಿದ್ದು, ರೈತ ಜಾನುವಾರುಗಳನ್ನ ಮೇಯಿಸುವ ಸಂದರ್ಭದಲ್ಲಿ ಹಸು ಮೇಲೆ ಹುಲಿ ದಾಳಿ ನಡೆಸಿ ಹಸುವನ್ನು ಗಾಯಗೊಳಿಸಿದೆ. ಗ್ರಾಮದಲ್ಲಿ ಹುಲಿಯ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು. ಅರಣ್ಯ ಇಲಾಖೆಯ ಅಧಿಕಾರಿಗಳು ರೈತರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ: ಹಳೆಯ ನೆನಪು ಮೆಲುಕು ಹಾಕಿದ ಡಿಸಿಎಂ ಡಿ.ಕೆ ಶಿವಕುಮಾರ್
ಅಧಿಕಾರಿಗಳಿಗೆ ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಹಲವು ಬಾರಿ ಮನವಿ ಮಾಡಿದ್ದರು ಯಾವುದೇ ರೀತಿ ಕ್ರಮ ಕೈಗೊಂಡಿಲ್ಲ ಇದರಿಂದ ಬೇಸತ್ತ ರೈತರು ಜಮೀನುಗಳಿಗೆ ತೆರಳಲು ಹಿಂದೇಟು ಹಾಕುತ್ತಿದ್ದು, ಗ್ರಾಮದಲ್ಲಿ ಜನರಿಗೆ ಭಯದ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆ ಹುಲಿ ಸೆರೆ ಹಿಡಿಯಲು ಬೋನು ಅಳವಡಿಸಬೇಕೆಂದು ಎಂದು ರೈತ ಸಂಘ ಮತ್ತು ಟ್ರಾಕ್ಟರ್ ಮಾಲೀಕರ ಸಂಘದ ಅಧ್ಯಕ್ಷ ಪರಶಿವಮೂರ್ತಿ ಒತ್ತಾಯಿಸಿದ್ದಾರೆ.